ಉಪಚುನಾವಣೆ ಪ್ರಚಾರಕ್ಕೆ ಉಚ್ಛಾಟಿತ ಶಾಸಕ? ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯ ಸ್ಫೋಟಕ ಹೇಳಿಕೆ
ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಮಾರ್ಚ್ 23ರಂದು ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಚುನಾವಣೆಯನ್ನು ಹಬ್ಬದಂತೆ ಆಚರಿಸಲು ನಿರ್ಧರಿಸಲಾಗಿದ್ದು, ಯಡಿಯೂರಪ್ಪ ಸೇರಿದಂತೆ ಹಲವು ರಾಜ್ಯ ಮತ್ತು ಕೇಂದ್ರ ನಾಯಕರು ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಚರಂತಿಮಠ ತಿಳಿಸಿದ್ದಾರೆ. ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಕ್ಯಾಂಪೇನ್ಗೆ ಬರಬಹುದು ಎಂಬ ಅಚ್ಚರಿಯ ಹೇಳಿಕೆಯನ್ನೂ ನೀಡಿದ್ದಾರೆ.
ಬಾಗಲಕೋಟೆ, ಮಾರ್ಚ್ 19: ಉಪ ಚುನಾವಣೆಯ ಬಾಗಲಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಮಾರ್ಚ್ 23ರ ಸೋಮವಾರದಂದು ತಮ್ಮ ನಾಮಪತ್ರವನ್ನು ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ, ಯಡಿಯೂರಪ್ಪ ಸೇರಿ ರಾಜ್ಯದ್ಯ ಪ್ರಮುಖ ನಾಯಕರು ಮತ್ತು ಮಾಜಿ ಮಂತ್ರಿಗಳು ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿಗಳ ಸೂಚನೆಯಂತೆ ಚುನಾವಣೆಯನ್ನು ಹಬ್ಬದಂತೆ ಆಚರಿಸುವ ನಿಟ್ಟಿನಲ್ಲಿ ಎಲ್ಲರೂ ಬರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಜೊತೆಗೆ ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ವಿಜಯಪುರ ಶಾಸಕ ಯತ್ನಾಳ್ ಕೂಡ ವೈಯಕ್ತಿಕ ಸಂಬಂಧಗಳ ಆಧಾರದ ಮೇಲೆ ಪ್ರಚಾರದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿರೋದು ಅಚ್ಚರಿ ಮೂಡಿಸಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Mar 19, 2026 12:54 PM
Follow Us
