ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಶಾಕ್: ಇನ್ನೂ ಹೆಚ್ಚಾಗುತ್ತಾ ತೈಲ ಬೆಲೆ? ತಜ್ಞರು ಹೇಳೋದೇನು ನೋಡಿ

Updated on: May 15, 2026 | 2:18 PM

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 3 ರೂ. ಹೆಚ್ಚಳವಾಗಿದೆ. ಮಧ್ಯಪ್ರಾಚ್ಯದ ಸಂಘರ್ಷ, ಜಾಗತಿಕ ಕಚ್ಚಾತೈಲ ಬೆಲೆ ಏರಿಕೆ ಮತ್ತು ತೈಲ ಕಂಪನಿಗಳ ನಷ್ಟ ಇದಕ್ಕೆ ಪ್ರಮುಖ ಕಾರಣ. ಭಾರತದ ಹೆಚ್ಚಿನ ಇಂಧನ ಆಮದು ಅವಲಂಬನೆ ಆರ್ಥಿಕ ಒತ್ತಡ ಹೇರುತ್ತಿದೆ. ತಜ್ಞರ ಪ್ರಕಾರ, ಮುಂದಿನ ದಿನಗಳಲ್ಲಿ ಬೆಲೆಗಳು 10-15 ರೂ. ಹೆಚ್ಚಾಗುವ ಸಾಧ್ಯತೆಯಿದೆ.

ಬೆಂಗಳೂರು, ಮೇ 15: ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 3 ರೂ.ನಷ್ಟು ಹೆಚ್ಚಳವಾಗಿದೆ. ಇದು ನಾಲ್ಕು ವರ್ಷಗಳ ಬಳಿಕ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಕೈಗೊಂಡ ಮೊದಲ ದರ ಪರಿಷ್ಕರಣೆಯಾಗಿದೆ. ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಉದ್ವಿಗ್ನ ಪರಿಸ್ಥಿತಿ ಜಾಗತಿಕ ಕಚ್ಚಾತೈಲ ಬೆಲೆಗಳ ಏರಿಕೆಗೆ ಕಾರಣವಾಗಿದೆ. ಭಾರತವು ತನ್ನ ಕಚ್ಚಾತೈಲದ ಶೇ 85-91 ಭಾಗವನ್ನು ಆಮದು ಮಾಡಿಕೊಳ್ಳುವುದರಿಂದ, ಅಂತರರಾಷ್ಟ್ರೀಯ ಮಾರುಕಟ್ಟೆಯ ಏರಿಳಿತ ನೇರವಾಗಿ ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ.

ಕಳೆದ 11 ವಾರಗಳಿಂದ ಕಚ್ಚಾತೈಲ ಬೆಲೆ ಏರಿಕೆಯಾಗಿದ್ದರೂ, ದೇಶೀಯ ತೈಲ ಕಂಪನಿಗಳು ದರಗಳನ್ನು ಸ್ಥಿರವಾಗಿರಿಸಿದ್ದವು. ಆದರೆ ನಿರಂತರ ನಷ್ಟ ಮತ್ತು ಕಾರ್ಯಾಚರಣಾ ವೆಚ್ಚ ಹೆಚ್ಚಿದ ಕಾರಣ, ಬೆಲೆ ಏರಿಕೆ ಅನಿವಾರ್ಯವಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 97.77 ರೂ. ಮತ್ತು ಡೀಸೆಲ್ ಬೆಲೆ 90.67 ರೂ. ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ 106.17 ರೂ. ಮತ್ತು ಡೀಸೆಲ್ 94.10 ರೂ. ಆಗಿದೆ. ಮುಂದಿನ ದಿನಗಳಲ್ಲಿ ಇಂಧನ ಬೆಲೆ 10-15 ರೂ.ನಷ್ಟು ಏರಿಕೆಯಾಗಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More