ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್: ಈ ಎಲ್ಲಾ ಸೌಲಭ್ಯ ನೀಡಲು ತೀರ್ಮಾನ

Updated on: Oct 08, 2025 | 6:48 PM

ಸಿಸಿ , ಓಸಿ ಪಡೆಯದೇ ಕಟ್ಟಿರುವ ನೂತನ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಹಾಗೂ ನೀರು ಸರಬರಾಜು ನೀಡಲು ತೀರ್ಮಾನಿಸಲಾಗಿದೆ.ಈ ಸಂಬಂಧ ಇಂದು (ಅಕ್ಟೋಬರ್ 08) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದಿದ್ದು, ರಾಜ್ಯದ್ಯಾಂತ 1200 ಅಡಿಯಲ್ಲಿ ಕಟ್ಟಿರುವ ಮನೆಗಳಿಗೆ ವಿದ್ಯುತ್ ಮತ್ತು ನೀರು ನೀಡಲು ನಿರ್ಧರಿಸಲಾಗಿದೆ. ಇನ್ನು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, 30X40ವರೆಗೆ ಅನುಮತಿ ಕೊಡಲು ತೀರ್ಮಾನ ಮಾಡಿದ್ದೇವೆ ಎಂದರು.

ಬೆಂಗಳೂರು, (ಅಕ್ಟೋಬರ್ 08): ಸಿಸಿ , ಓಸಿ ಪಡೆಯದೇ ಕಟ್ಟಿರುವ ನೂತನ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಹಾಗೂ ನೀರು ಸರಬರಾಜು ನೀಡಲು ತೀರ್ಮಾನಿಸಲಾಗಿದೆ.ಈ ಸಂಬಂಧ ಇಂದು (ಅಕ್ಟೋಬರ್ 08) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದಿದ್ದು, ರಾಜ್ಯದ್ಯಾಂತ 1200 ಅಡಿಯಲ್ಲಿ ಕಟ್ಟಿರುವ ಮನೆಗಳಿಗೆ ವಿದ್ಯುತ್ ಮತ್ತು ನೀರು ನೀಡಲು ನಿರ್ಧರಿಸಲಾಗಿದೆ. ಇನ್ನು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, 30X40ವರೆಗೆ ಅನುಮತಿ ಕೊಡಲು ತೀರ್ಮಾನ ಮಾಡಿದ್ದೇವೆ. ಕಾನೂನಿನಲ್ಲಿ ಇರುವ ಅಡೆತಡೆ ನಿವಾರಿಸಲು ಚರ್ಚಿಸಲಾಗಿದೆ. 30X40 ಅಂದರೆ 1200 ಚ.ಮೀ.ಗೆ ಅನುಮತಿ ನೀಡಲಾಗಿದೆ. ಆದ್ರೆ, ಇಂಧನ ಇಲಾಖೆಗೆ ಅನುಷ್ಠಾನಗೊಳಿಸಲು ಅಡೆತಡೆ ಇವೆ. ಅದನ್ನು ನಿವಾರಿಸಿ ಅನುಮತಿ ನೀಡಲು ಪ್ರಯತ್ನಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More