ವಿಲ್ ಜ್ಯಾಕ್ಸ್ ಸಿಡಿಲಬ್ಬರಕ್ಕೆ ತತ್ತರಿಸಿದ ಲಂಡನ್ ಸ್ಪಿರಿಟ್
Oval Invincibles vs London Spirit: 153 ರನ್ಗಳ ಗುರಿ ಬೆನ್ನತ್ತಿದ ಓವಲ್ ಇನ್ವಿನ್ಸಿಬಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವಿಲ್ ಜ್ಯಾಕ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್‌ನಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಜ್ಯಾಕ್ಸ್ 27 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್ ಗಳೊಂದಿಗೆ 45 ರನ್ ಬಾರಿಸಿದರು.
ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್‌ನ 29ನೇ ಪಂದ್ಯದಲ್ಲಿ ಓವಲ್ ಇನ್ವಿನ್ಸಿಬಲ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಓವಲ್ ಇನ್ವಿನ್ಸಿಬಲ್ಸ್ ತಂಡವು ಲಂಡನ್ ಸ್ಪಿರಿಟ್ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಲಂಡನ್ ಸ್ಪಿರಿಟ್ ಪರ ಜೇಮಿ ಸ್ಮಿತ್ 28 ರನ್ ಗಳಿಸಿದರೆ, ಜೇಮಿ ಓವರ್ಟನ್ 31 ರನ್ ಬಾರಿಸಿದರು. ಈ ಮೂಲಕ ಲಂಡನ್ ಸ್ಪಿರಿಟ್ ತಂಡವು 100 ಎಸೆತಗಳಲ್ಲಿ 7 ವಿಕೆಟ್ ಕಳೆದುಕೊಂಡು 152 ರನ್ ಕಲೆಹಾಕಿತು.
153 ರನ್ಗಳ ಗುರಿ ಬೆನ್ನತ್ತಿದ ಓವಲ್ ಇನ್ವಿನ್ಸಿಬಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವಿಲ್ ಜ್ಯಾಕ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್‌ನಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಜ್ಯಾಕ್ಸ್ 27 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್ ಗಳೊಂದಿಗೆ 45 ರನ್ ಬಾರಿಸಿದರು.
ಆ ಬಳಿಕ ಬಂದ ಜೋರ್ಡನ್ ಕಾಕ್ಸ್ 27 ಎಸೆತಗಳಲ್ಲಿ 5 ಫೋರ್ ಹಾಗೂ 2 ಸಿಕ್ಸ್ ನೊಂದಿಗೆ 47 ರನ್ ಚಚ್ಚಿದರು. ಈ ಮೂಲಕ ಓವಲ್ ಇನ್ವಿನ್ಸಿಬಲ್ಸ್ ತಂಡವು 78 ಎಸೆತಗಳಲ್ಲಿ 153 ರನ್ ಬಾರಿಸಿ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

