ವಿಲ್ ಜ್ಯಾಕ್ಸ್ ಸಿಡಿಲಬ್ಬರಕ್ಕೆ ತತ್ತರಿಸಿದ ಲಂಡನ್ ಸ್ಪಿರಿಟ್
Oval Invincibles vs London Spirit: 153 ರನ್ಗಳ ಗುರಿ ಬೆನ್ನತ್ತಿದ ಓವಲ್ ಇನ್ವಿನ್ಸಿಬಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವಿಲ್ ಜ್ಯಾಕ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್‌ನಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಜ್ಯಾಕ್ಸ್ 27 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್ ಗಳೊಂದಿಗೆ 45 ರನ್ ಬಾರಿಸಿದರು.
ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್‌ನ 29ನೇ ಪಂದ್ಯದಲ್ಲಿ ಓವಲ್ ಇನ್ವಿನ್ಸಿಬಲ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಓವಲ್ ಇನ್ವಿನ್ಸಿಬಲ್ಸ್ ತಂಡವು ಲಂಡನ್ ಸ್ಪಿರಿಟ್ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಲಂಡನ್ ಸ್ಪಿರಿಟ್ ಪರ ಜೇಮಿ ಸ್ಮಿತ್ 28 ರನ್ ಗಳಿಸಿದರೆ, ಜೇಮಿ ಓವರ್ಟನ್ 31 ರನ್ ಬಾರಿಸಿದರು. ಈ ಮೂಲಕ ಲಂಡನ್ ಸ್ಪಿರಿಟ್ ತಂಡವು 100 ಎಸೆತಗಳಲ್ಲಿ 7 ವಿಕೆಟ್ ಕಳೆದುಕೊಂಡು 152 ರನ್ ಕಲೆಹಾಕಿತು.
153 ರನ್ಗಳ ಗುರಿ ಬೆನ್ನತ್ತಿದ ಓವಲ್ ಇನ್ವಿನ್ಸಿಬಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವಿಲ್ ಜ್ಯಾಕ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್‌ನಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಜ್ಯಾಕ್ಸ್ 27 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್ ಗಳೊಂದಿಗೆ 45 ರನ್ ಬಾರಿಸಿದರು.
ಆ ಬಳಿಕ ಬಂದ ಜೋರ್ಡನ್ ಕಾಕ್ಸ್ 27 ಎಸೆತಗಳಲ್ಲಿ 5 ಫೋರ್ ಹಾಗೂ 2 ಸಿಕ್ಸ್ ನೊಂದಿಗೆ 47 ರನ್ ಚಚ್ಚಿದರು. ಈ ಮೂಲಕ ಓವಲ್ ಇನ್ವಿನ್ಸಿಬಲ್ಸ್ ತಂಡವು 78 ಎಸೆತಗಳಲ್ಲಿ 153 ರನ್ ಬಾರಿಸಿ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
