ಸ್ವಪಕ್ಷದ ಶಾಸಕನ ವಿರುದ್ಧ ಏಕವಚನದಲ್ಲೇ ವಾಗ್ದಾಳಿ, ಬಿಜೆಪಿ ಸೇರ್ಪಡೆ ಬಗ್ಗೆ ರಾಜಣ್ಣ ಹೇಳಿದ್ದಿಷ್ಟು
ಮಾಜಿ ಸಚಿವ ಕೆ.ಎನ್.ರಾಜಣ್ಣ (K.N.Rajanna) ಈಗಾಗಲೇ ಬಿಜೆಪಿ ಸೇರ್ಪಡೆಗೆ ಅರ್ಜಿ ಹಾಕಿದ್ದಾರೆ. ಅವರು ಹೋಗುವ ಮುನ್ನ ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ರಾಜಣ್ಣ ಅವರನ್ನು ಬಿಜೆಪಿ ನಾಯಕರೇ ಸ್ವಾಗತಿಸುತ್ತಿದ್ದಾರೆ. ಈಗಾಗಲೇ ಒಂದು ಕಾಲು ಬಿಜೆಪಿಯಲ್ಲಿ ಇಟ್ಟಿರುವ ಅವರು, ನೂರಕ್ಕೆ ನೂರು ಬಿಜೆಪಿ ಸೇರ್ಪಡೆ ಆಗುತ್ತಾರೆ. ನಮ್ಮ ಸರ್ಕಾರ ಇಲ್ಲದೆ ಹೋಗಿದ್ದರೆ ಇಷ್ಟೊತ್ತಿಗಾಗಲೇ ಅವರು ಬಿಜೆಪಿ ಸೇರ್ಪಡೆ ಆಗಿರುತ್ತಿದ್ದರು ಎಂದು ಸ್ವಪಕ್ಷದ ಶಾಸಕ ಎಚ್.ಸಿ.ಬಾಲಕೃಷ್ಣ ಬಾಂಬ್ ಸಿಡಿಸಿದ್ದು, ಇದು ಕಾಂಗ್ರೆಸ್ ನಲ್ಲಿ ಸಂಚಲನ ಮೂಡಿಸಿದೆ. ಇನ್ನು ಬಾಲಕೃಷ್ಣ ಹೇಳಿಕೆಗೆ ಖುದ್ದು ರಾಜಣ್ಣ ಅವರೇ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತುಮಕೂರು (ಸೆ.03): ಮಾಜಿ ಸಚಿವ ಕೆ.ಎನ್.ರಾಜಣ್ಣ (K.N.Rajanna) ಈಗಾಗಲೇ ಬಿಜೆಪಿ ಸೇರ್ಪಡೆಗೆ ಅರ್ಜಿ ಹಾಕಿದ್ದಾರೆ. ಅವರು ಹೋಗುವ ಮುನ್ನ ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ರಾಜಣ್ಣ ಅವರನ್ನು ಬಿಜೆಪಿ ನಾಯಕರೇ ಸ್ವಾಗತಿಸುತ್ತಿದ್ದಾರೆ. ಈಗಾಗಲೇ ಒಂದು ಕಾಲು ಬಿಜೆಪಿಯಲ್ಲಿ ಇಟ್ಟಿರುವ ಅವರು, ನೂರಕ್ಕೆ ನೂರು ಬಿಜೆಪಿ ಸೇರ್ಪಡೆ ಆಗುತ್ತಾರೆ. ನಮ್ಮ ಸರ್ಕಾರ ಇಲ್ಲದೆ ಹೋಗಿದ್ದರೆ ಇಷ್ಟೊತ್ತಿಗಾಗಲೇ ಅವರು ಬಿಜೆಪಿ ಸೇರ್ಪಡೆ ಆಗಿರುತ್ತಿದ್ದರು ಎಂದು ಸ್ವಪಕ್ಷದ ಶಾಸಕ ಎಚ್.ಸಿ.ಬಾಲಕೃಷ್ಣ ಬಾಂಬ್ ಸಿಡಿಸಿದ್ದು, ಇದು ಕಾಂಗ್ರೆಸ್ ನಲ್ಲಿ ಸಂಚಲನ ಮೂಡಿಸಿದೆ. ಇನ್ನು ಬಾಲಕೃಷ್ಣ ಹೇಳಿಕೆಗೆ ಖುದ್ದು ರಾಜಣ್ಣ ಅವರೇ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ರಾಜಣ್ಣ, ನಾನು ಬಿಜೆಪಿಗೆ ಹೋಗುತ್ತೇನೆ ಎಂದು ಯಾವನು ಹೇಳಿದ್ದು? ಬಾಲಕೃಷ್ಣ ಹೇಳೋದು ಹೇಳಿಕೊಳ್ಳಲಿ . ಅವನು ಬೇಕಾದರೆ ಬ್ರೈನ್ ಮ್ಯಾಪಿಂಗ್ ಮಾಡಿಕೊಳ್ಳಲಿ ಎಂದು ಬಾಲಕೃಷ್ಣ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಈ ಮೂಲಕ ಬಿಜೆಪಿ ಸೇರುತ್ತಾರೆಂಬ ಆರೋಪವನ್ನು ಅಲ್ಲಗಳೆದಿದ್ದಾರೆ.

