ವೀರ್ ಸಾವರ್ಕರ್ ಬಗ್ಗೆ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ: ಡಿಕೆ ಶಿವಕುಮಾರ್

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 17, 2022 | 1:51 PM

ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಖಚಿತವಾಗಿದೆ, ಆ ಪಕ್ಷದ ನಾಯಕರು ನಮ್ಮ ಪಕ್ಷದ ಮುಖ್ಯಮಂತ್ರಿಯಾಗುವ ಬಗ್ಗೆ ಮಾತಾಡಿದ್ದು ಕೇಳಿ ಸಂತೋಷವಾಗುತ್ತದೆ,’ ಎಂದು ಡಿಕೆಶಿ ಹೇಳಿದರು.

ನವದೆಹಲಿ: ಬುಧವಾರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಕೆಪಿಸಿಸಿ ಮುಖ್ಯಸ್ಥ ಡಿಕೆ ಶಿವಕುಮಾರ್ (DK Shivakumar) ವೀರ್ ಸಾವರ್ಕರ್ ಫೋಟೋ ಹಾಕಿದ್ದ ಬಗ್ಗೆ ಸಿದ್ದರಾಮಯ್ಯ (Siddaramaiah) ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು. ಹಾಗೆಯೇ, ಸಾರಿಗೆ ಸಚಿವ ಬಿ ಶ್ರೀರಾಮುಲು (B Sriramulu) ಅವರು ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ನೋಡಬೇಕೆನ್ನುವುದು ತನ್ನಾಸೆ ಅಂತ ಹೇಳಿರುವುದಕ್ಕೆ ಶಿವಕುಮಾರ್ ಅವರು ‘ಅದು ಬಿಜೆಪಿ ಸರ್ಕಾರದ ಸ್ಥಿತಿಯನ್ನು ವಿವರಿಸುತ್ತದೆ, ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಖಚಿತವಾಗಿದೆ, ಆ ಪಕ್ಷದ ನಾಯಕರು ನಮ್ಮ ಪಕ್ಷದ ಮುಖ್ಯಮಂತ್ರಿಯಾಗುವ ಬಗ್ಗೆ ಮಾತಾಡಿದ್ದು ಕೇಳಿ ಸಂತೋಷವಾಗುತ್ತದೆ,’ ಎಂದರು.