ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಬಿಅರ್ ಪಾಟೀಲ್, ಆಳಂದ ಶಾಸಕ

ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಬಿಅರ್ ಪಾಟೀಲ್, ಆಳಂದ ಶಾಸಕ

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 29, 2023 | 11:06 AM

ಮಂಗಳವಾರದಂದು ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತಾಡುವಾಗ ಬಿಆರ್ ಪಾಟೀಲ್ ಬರೆದಿರುವ ಪತ್ರ ತನಗೆ ಸಿಕ್ಕಿಲ್ಲ ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಆಳಂದ ಶಾಸಕನಿಗೆ ಬೆಂಗಳೂರು ಬಂದು ಭೇಟಿಯಾಗುವಂತೆ ಹೇಳಿದ್ದಾರೆ. ಸಿದ್ದರಾಮಯ್ಯರನ್ನು ಕಂಡು ಸಮಸ್ಯೆ ಹೇಳಿಕೊಳ್ಳುವುದಾಗಿ ಪಾಟೀಲ್ ಟಿವಿ9 ಗೆ ತಿಳಿಸಿದ್ದಾರೆ.

ಕಲಬುರಗಿ: ಆಳಂದ ಶಾಸಕ ಬಿಆರ್ ಪಾಟೀಲ್ (BR Patil) ಯಾವುದೇ ಪಕ್ಷದಲ್ಲಿದ್ದರೂ ಆ ಪಕ್ಷದ ನಾಯಕರಿಗೆ ಫಜೀತಿಗಿಟ್ಟುಕೊಳ್ಳುವ ಹೇಳಿಕೆ ಇಲ್ಲವೇ ಕೆಲಸಗಳನ್ನು ಮಾಡುತ್ತಾರೆ. ಸಿದ್ದರಾಮಯ್ಯ ಸರ್ಕಾರ (Siddaramaiah government) ಅಧಿಕಾರಕ್ಕೆ ಬಂದ ಕೂಡಲೇ ಅವರು ಮುಖ್ಯಮಂತ್ರಿಗಳಿಗೊಂದು ಪತ್ರ ಬರೆದಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಅದನ್ನ ಸರಿಪಡಿಸಲು ಸಿದ್ದರಾಮಯ್ಯ ಪಟ್ಟ ಪಡಿಪಾಟಲು ಕನ್ನಡಿಗರಿಗೆ ಗೊತ್ತಿಲ್ಲದೇನಿಲ್ಲ. ಈಗ ಅವರ ಮತ್ತೊಂದು ಪತ್ರ ಸಿದ್ದರಾಮಯ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕಲಬುರಗಿಯಲ್ಲಿ ಟಿವಿ9 ಕನ್ನಡ ವಾಹಿನಿಯ ವರದಿಗಾರನೊಂದಿಗೆ ಮಾತಾಡಿರುವ ಪಾಟೀಲ್, ಜಿಲ್ಲಾ ಉಸ್ತುವಾರಿ ಮಂತ್ರಿ ಪ್ರಿಯಾಂಕ್ ಖರ್ಗೆ (Priyank Kharge) ಅವರೊಂದಿಗೆ ಯಾವುದೇ ತಕರಾರಿಲ್ಲ, ಕಂದಾಯ ಸಚಿವಾರಾಗಿರುವ ಕೃಷ್ಣ ಭೈರೇಗೌಡ (Krishna Byre Gowda) ತನ್ನ ವಿರುದ್ಧ ನಕಾರಾತ್ಮಕ ಕಾಮೆಂಟ್ ಗಳನ್ನು ಮಾಡಿ ತಮ್ಮ ತಲೆಯ ಮೇಲೆ ಅನುಮಾನದ ಗೂಬೆ ಕೂರಿಸಿದ್ದಾರೆ ಎಂದು ಹೇಳಿದರು. ಈ ಬಗ್ಗೆ ತನಿಖೆ ನಡೆದು ತಾನು ಆರೋಪ ಮುಕ್ತಗೊಳ್ಳದ ಹೊರತು ಸದನದಲ್ಲಿ ಕಾಲಿಡಲ್ಲ ಮತ್ತು ಆರೋಪ ಸಾಬೀತಾದರೆ ರಾಜೀನಾಮೆ ಸಲ್ಲಿಸುತ್ತೇನೆಂದು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿರುವುದಾಗಿ ಪಾಟೀಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ