ಸಿದ್ದರಾಮಯ್ಯ ಸಿಎಂ ಆಗದಿದ್ದರೆ ಅರ್ಧ ಮೀಸೆ ಬೋಳಿಸ್ತೀನಿ ಎಂದ ಬಾಲಕ: ವಿಡಿಯೋ ವೈರಲ್
ಹಾಲು ಕುಡಿಯುವ ಬಾಲಕನೋರ್ವ ಸಿದ್ದರಾಮಯ್ಯ ಸಿಎಂ ಆಗದಿದ್ದರೆ ಅರ್ಧ ಮೀಸೆ ಬೋಳಿಸ್ತೀನಿ ಎಂದಿದ್ದು, ಇದೀಗ ಈ ವಿಡಿಯೋ ವೈರಲ್ ಆಗಿದೆ.
ಬಾಗಲಕೋಟೆ: ಕರ್ನಾಟಕದ ಮುಂದಿನ ಸಿಎಂ ಯಾರು ಅನ್ನೋ ಫೈಟ್, ಈಗ ದಿಲ್ಲಿಗೆ ಶಿಫ್ಟ್ ಆಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹ ತಮಗೆ ಸಿಎಂ ಸ್ಥಾನ ಬೇಕೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಸಿಎಂ ಆಯ್ಕೆ ಕಗ್ಗಂಟಾಗಿದೆ. ಇದೀಗ ಬಂದ ಮಾಹಿತಿ ಪ್ರಕಾರ ದೆಹಲಿಯಲ್ಲಿ ಹೈಕಮಾಂಡ್ ಸರಣಿ ಸಭೆ ಮಾಡುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ಮುಂದಿನ ಸಿಎಂ ಯಾರು ಅನ್ನೋ ಘೋಷಣೆ ಹೊರ ಬೀಳೋ ಸಾಧ್ಯತೆಯಿದೆ. ಹೀಗಾಗಿ ಎಲ್ಲರ ಚಿತ್ತ ಈಗ ದೆಹಲಿಯತ್ತ ನೆಟ್ಟಿದೆ. ಇದರ ಮಧ್ಯೆ ಇನ್ನೂ ಹಾಲು ಕುಡಿಯುವ ಬಾಲಕನೋರ್ವ ಸಿದ್ದರಾಮಯ್ಯ ಸಿಎಂ ಆಗದಿದ್ದರೆ ಅರ್ಧ ಮೀಸೆ ಬೋಳಿಸ್ತೀನಿ ಎಂದಿದ್ದಾನೆ. ಅಲ್ಲದೇ ಸಿದ್ದರಾಮಯ್ಯ ಯಾಕೆ ಸಿಎಂ ಆಗ್ಬೇಕು ಎನ್ನುವ ಬಗ್ಗೆಯೂ ಕಾರಣಗಳನ್ನು ನೀಡಿದ್ದು, ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದ ಮಾಳು ದಳವಾಯಿ ಎಂಬ ಡೊಳ್ಳು ಕಲಾವಿದನ ಮಗ ಆದಿತ್ಯ ಮಾತನಾಡಿರುವ ವಿಡಿಯೋ ಇದಾಗಿದ್ದು, ಸಿದ್ದರಾಮಯ್ಯ ಬೂಟ್ ಕೊಟ್ಟಾನ,ಅಕ್ಕಿ ಕೊಟ್ಟಾನ ಹಾಲು ಕೊಟ್ಟಾನ ಅಂತೆಲ್ಲ ಹೇಳಿದ್ದಾನೆ.

ಪಹಲ್ಗಾಮ್ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ

ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!

ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
