ಸಿದ್ದರಾಮಯ್ಯ ಸಿಎಂ ಆಗದಿದ್ದರೆ ಅರ್ಧ ಮೀಸೆ ಬೋಳಿಸ್ತೀನಿ ಎಂದ ಬಾಲಕ: ವಿಡಿಯೋ ವೈರಲ್

Updated on: May 16, 2023 | 3:45 PM

ಹಾಲು ಕುಡಿಯುವ ಬಾಲಕನೋರ್ವ ಸಿದ್ದರಾಮಯ್ಯ ಸಿಎಂ ಆಗದಿದ್ದರೆ ಅರ್ಧ ಮೀಸೆ ಬೋಳಿಸ್ತೀನಿ ಎಂದಿದ್ದು, ಇದೀಗ ಈ ವಿಡಿಯೋ ವೈರಲ್ ಆಗಿದೆ.

ಬಾಗಲಕೋಟೆ:  ಕರ್ನಾಟಕದ ಮುಂದಿನ ಸಿಎಂ ಯಾರು ಅನ್ನೋ ಫೈಟ್, ಈಗ ದಿಲ್ಲಿಗೆ ಶಿಫ್ಟ್ ಆಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹ ತಮಗೆ ಸಿಎಂ ಸ್ಥಾನ ಬೇಕೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಸಿಎಂ ಆಯ್ಕೆ ಕಗ್ಗಂಟಾಗಿದೆ. ಇದೀಗ ಬಂದ ಮಾಹಿತಿ ಪ್ರಕಾರ ದೆಹಲಿಯಲ್ಲಿ ಹೈಕಮಾಂಡ್ ಸರಣಿ ಸಭೆ ಮಾಡುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ಮುಂದಿನ ಸಿಎಂ ಯಾರು ಅನ್ನೋ ಘೋಷಣೆ ಹೊರ ಬೀಳೋ ಸಾಧ್ಯತೆಯಿದೆ. ಹೀಗಾಗಿ ಎಲ್ಲರ ಚಿತ್ತ ಈಗ ದೆಹಲಿಯತ್ತ ನೆಟ್ಟಿದೆ. ಇದರ ಮಧ್ಯೆ ಇನ್ನೂ ಹಾಲು ಕುಡಿಯುವ ಬಾಲಕನೋರ್ವ ಸಿದ್ದರಾಮಯ್ಯ ಸಿಎಂ ಆಗದಿದ್ದರೆ ಅರ್ಧ ಮೀಸೆ ಬೋಳಿಸ್ತೀನಿ ಎಂದಿದ್ದಾನೆ. ಅಲ್ಲದೇ ಸಿದ್ದರಾಮಯ್ಯ ಯಾಕೆ ಸಿಎಂ ಆಗ್ಬೇಕು ಎನ್ನುವ ಬಗ್ಗೆಯೂ ಕಾರಣಗಳನ್ನು ನೀಡಿದ್ದು, ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದ ಮಾಳು ದಳವಾಯಿ ಎಂಬ ಡೊಳ್ಳು ಕಲಾವಿದನ ಮಗ ಆದಿತ್ಯ ಮಾತನಾಡಿರುವ ವಿಡಿಯೋ ಇದಾಗಿದ್ದು, ಸಿದ್ದರಾಮಯ್ಯ ಬೂಟ್ ಕೊಟ್ಟಾನ,ಅಕ್ಕಿ ಕೊಟ್ಟಾನ ಹಾಲು ಕೊಟ್ಟಾನ ಅಂತೆಲ್ಲ ಹೇಳಿದ್ದಾನೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More