ಈ ಬಂಡೆ ಸಿದ್ದರಾಮಯ್ಯ ಜತೆ ಇದೆ: ಸಿಎಂ ಅಭಿಮಾನಿಗಳಿಗೆ ಡಿಕೆಶಿ ಅಭಯ

Updated on: Dec 05, 2024 | 4:02 PM

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಸಮಿತಿಯ ಆಶ್ರಯದಲ್ಲಿ ಇಂದು (ಡಿಸೆಂಬರ್ -5) ಬೃಹತ್‌ ಜನ ವಿಕಾಸ ಸಮಾವೇಶ ನಡೆಯಿತು. ಈ ಮೂಲಕ ಸಮಾವೇಶದಲ್ಲಿ ಕೈ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ ಸಿಎಂ ಜೊತೆ ನಿಲ್ಲುವೆ ಎಂದು ಭರವಸೆ ನೀಡಿದರು.

ಹಾಸನ, (ಡಿಸೆಂಬರ್ 05): ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ಬೃಹತ್‌ ಜನ ವಿಕಾಸ ಸಮಾವೇಶ ನಡಯಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಸಮಿತಿಯ ಆಶ್ರಯದಲ್ಲಿ ಇಂದು (ಡಿಸೆಂಬರ್ -5) ಬೃಹತ್‌ ಜನ ವಿಕಾಸ ಸಮಾವೇಶ ನಡೆಯಿತು. ಈ ಮೂಲಕ ಸಮಾವೇಶದಲ್ಲಿ ಕೈ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ ಸಿಎಂ ಜೊತೆ ನಿಲ್ಲುವೆ ಎಂದು ಭರವಸೆ ನೀಡಿದರು. ತಲೆ ಕೆಡಿಸಿಕೊಳ್ಳಬೇಡಿ ಈ ಬಂಡೆ ಡಿಕೆ ಸಿದ್ದರಾಮಯ್ಯ ಜತೆ ಇದೆ. ಈಗಲೂ ಇರುತ್ತೇನೆ, ನಾಳೆನೂ ಇರುತ್ತೇನೆ, ಸಾಯುವವರೆಗೂ ಇರುವೆ ಎಂದು ಸಿದ್ದರಾಮಯ್ಯನವರ ಅಭಿಮಾನಿಗಳಿಗೆ ಭರವಸೆ ನೀಡಿದರು. ಈ ಮೂಲಕ ವಿಪಕ್ಷಗಳಿಗೆ ಸಂದೇಶ ಕೊಟ್ಟರು.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More