ಬೆಂಗಳೂರಿನಲ್ಲಿ ಫುಟ್ಪಾತ್ ವ್ಯಾಪಾರ ಸ್ಥಗಿತ: ಪರ್ಯಾಯ ತಿಳಿಸಿದ ಡಿಕೆಶಿ
ಬೆಂಗಳೂರಿನ ಎಲ್ಲಾ ಫುಟ್ ಪಾತ್ ಅಂಗಡಿಗಳನ್ನು ತೆರವುಗೊಳಿಸಲು ನಿರ್ಧರಿಸಿದ್ದೇವೆ. 27,665 ಬೀದಿ ಬದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದು, ನಾವು ಅವರಿಗೆ ತಳ್ಳುವ ವಾಹನ ನೀಡಲು ಸಿದ್ಧರಿದ್ದೇವೆ. ನಾವು ನಿಗದಿ ಮಾಡುವ ಜಾಗದಲ್ಲಿ ವಾಹನ ಇಟ್ಟುಕೊಂಡು ವ್ಯಾಪಾರ ಮಾಡಬೇಕು. 3,755 ಜನ ವ್ಯಾಪಾರಿಗಳು ವಾಹನ ಬೇಕು ಎಂದು ಕೇಳಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರು, (ಮೇ 24): ಬೆಂಗಳೂರಿನ ಎಲ್ಲಾ ಫುಟ್ ಪಾತ್ ಅಂಗಡಿಗಳನ್ನು ತೆರವುಗೊಳಿಸಲು ನಿರ್ಧರಿಸಿದ್ದೇವೆ. 27,665 ಬೀದಿ ಬದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದು, ನಾವು ಅವರಿಗೆ ತಳ್ಳುವ ವಾಹನ ನೀಡಲು ಸಿದ್ಧರಿದ್ದೇವೆ. ನಾವು ನಿಗದಿ ಮಾಡುವ ಜಾಗದಲ್ಲಿ ವಾಹನ ಇಟ್ಟುಕೊಂಡು ವ್ಯಾಪಾರ ಮಾಡಬೇಕು. 3,755 ಜನ ವ್ಯಾಪಾರಿಗಳು ವಾಹನ ಬೇಕು ಎಂದು ಕೇಳಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರ ಮೂಲಕ ಒತ್ತಡ ತರಬೇಡಿ. ಕಾನೂನಿನಲ್ಲಿ ಇದಕ್ಕೆ ಅವಕಾಶವಿಲ್ಲ. ನಾವು ಒಂದೇ ಬಾರಿಗೆ ಇದನ್ನು ತೆರವುಗೊಳಿಸಲು ಆಗದಿದ್ದರೂ, ವ್ಯವಸ್ಥಿತವಾಗಿ ಹಂತ ಹಂತವಾಗಿ ಇದನ್ನು ಸರಿಪಡಿಸಲಾಗುವುದು ಎಂದರು.
Latest Videos