Rohini Sindhuri Vs D Roopa; ವೈಯಕ್ತಿಕ ಬದುಕಿನ ಬಗ್ಗೆ ಮಾತಾಡಿರುವ ರೂಪಾ ವಿರುದ್ಧ ಕಾನೂನು ಹೋರಾಟ ನಡೆಸುವೆ: ರೋಹಿಣಿ ಸಿಂಧೂರಿ

ಅರುಣ್​ ಕುಮಾರ್​ ಬೆಳ್ಳಿ

Updated on: Feb 20, 2023 | 1:35 PM

ರೂಪಾ ಮಾನಸಿವಾಗಿ ಅಸ್ವಸ್ಥರಾಗಿದ್ದಾರೆ ಅಂತ ರೋಹಿಣಿಯವರ ಪತಿ ಸುಧೀರ್ ರೆಡ್ಡಿ ಹೇಳಿರುವ ಹಿನ್ನೆಲೆಯಲ್ಲಿ ಗೆಟ್ ವೆಲ್ ಸೂನ್ ಅಂತ ಹೇಳಿ, ರೂಪಾ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಹೇಳಿದರು.

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗೀಲ್ (D Roopa Moudgil) ನಡುವಿನ ಜಗಳ ಚರ್ಚೆಯ ಕೇಂದ್ರಬಿಂದುವಾಗಿದೆ. ನಗರದ ಟಿ ದಾಸರಹಳ್ಳಿಯಲ್ಲಿರುವ ತಮ್ಮ ನಿವಾಸದ ಮುಂದೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ರೋಹಿಣಿ ಅವರು, ಮೊದಲಿಗೆ ಮಾಧ್ಯಮದವರು ಮನೆವರೆಗೆ ಹೋಗಿದ್ದಕ್ಕೆ ಬೇಜಾರು ಮಾಡಿಕೊಂಡರು. ನಂತರ ಒಲ್ಲದ ಮನಸ್ಸಿನಿಂದಲೇ ಮಾತಾಡಿದ ಅವರು, ಲಗೇ ರಹೋ ಮುನ್ನಾ ಭಾಯಿ (Lage Raho Munna Bhai) ಚಿತ್ರದಲ್ಲಿ ಸಂಜಯ್ ದತ್ ಬೋಮನ್ ಇರಾನಿಗೆ ಗೆಟ್ ವೆಲ್ ಸೂನ್ ಅಂತ ಜನರಿಂದ ಹೇಳಿಸಿದ ಹಾಗೆ, ಗೆಟ್ ವೆಲ್ ಸೂನ್ ಅಂತಷ್ಟೇ ಹೇಳಬಯಸುತ್ತೇನೆ ಎಂದರು. ರೂಪಾ ಮಾನಸಿವಾಗಿ ಅಸ್ವಸ್ಥರಾಗಿದ್ದಾರೆ ಅಂತ ರೋಹಿಣಿಯವರ ಪತಿ ಸುಧೀರ್ ರೆಡ್ಡಿ ಹೇಳಿರುವ ಹಿನ್ನೆಲೆಯಲ್ಲಿ ಗೆಟ್ ವೆಲ್ ಸೂನ್ ಅಂತ ಹೇಳಿ, ರೂಪಾ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 20, 2023 01:35 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.