ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ: ಅಡ್ಡಮತದಾನ ಮಾಡಿದವರಿಗೆ ಶಾಸ್ತಿ ಫಿಕ್ಸ್ ಎಂದ ಅಶೋಕ್

Updated on: Jun 21, 2026 | 3:14 PM

ಅಡ್ಡಮತದಾನ ಮಾಡಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಚರ್ಚೆಗಳು ನಡೆದಿವೆ. ಆದ್ರೆ, ಅಡ್ಡಮತದಾನ ಮಾಡಿದವರು ಯಾರು ಎಂದು ಪತ್ತೆ ಮಾಡುವುದೇ ಒಂದು ಸವಾಲ್ ಆಗಿದೆ. ಇದರ ಮಧ್ಯೆ ಬಿಜೆಪಿ ಇದೀಗ ಅಂತಿಮವಾಗಿ ಧರ್ಮಸ್ಥಳ ಮಂಜುನಾಥನ ಮೇಲೆ ಆಣೆ ಪ್ರಮಾಣ ಮಾಡಿಸಲು ಮುಂದಾಗಿದೆ. ಈ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಅಡ್ಡಮತದಾನದ ಬಗ್ಗೆ ಚರ್ಚೆ ಮಾಡಿ ತಪ್ಪಿತಸ್ಥರಿಗೆ ಬುದ್ಧಿ ಕಲಿಸುತ್ತೇವೆ. ಕೇಂದ್ರದ ನಾಯಕರ ಜೊತೆ ಗಂಭೀರವಾಗಿ ಚರ್ಚೆ ನಡೆಸಿ ಬಳಿಕ ಕ್ರಮ ಕೈಗೊಳ್ಳುತ್ತೇವೆ. ಈ ಜನ್ಮದಲ್ಲಿ ಚುನಾವಣೆ ನಿಲ್ಲಬಾರದು ಹಾಗೇ ಮಾಡ್ತೀವಿ ಎಂದು ಖಡಕ್ ಆಗಿ ಹೇಳಿದ್ದಾರೆ.

ಬೆಂಗಳೂರು, (ಜೂನ್ 21): ಕರ್ನಾಟಕ ವಿಧಾನಪರಿಷತ್​​​ ಚುನಾವಣೆಯಲ್ಲಿ ಮೈತ್ರಿಪಕ್ಷಗಳಾದ ಜೆಡಿಎಸ್ ಹಾಗೂ ಜೆಡಿಎಸ್ ಶಾಸಕರು ಅಡ್ಡಮತದಾನ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಅಡ್ಡಮತದಾನದಿಂದಾಗಿ ಜೆಡಿಎಸ್ ಹಾಗೂ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅಡ್ಡಮತದಾನ ಮಾಡಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಚರ್ಚೆಗಳು ನಡೆದಿವೆ. ಆದ್ರೆ, ಅಡ್ಡಮತದಾನ ಮಾಡಿದವರು ಯಾರು ಎಂದು ಪತ್ತೆ ಮಾಡುವುದೇ ಒಂದು ಸವಾಲ್ ಆಗಿದೆ. ಇದರ ಮಧ್ಯೆ ಬಿಜೆಪಿ ಇದೀಗ ಅಂತಿಮವಾಗಿ ಧರ್ಮಸ್ಥಳ ಮಂಜುನಾಥನ ಮೇಲೆ ಆಣೆ ಪ್ರಮಾಣ ಮಾಡಿಸಲು ಮುಂದಾಗಿದೆ. ಈ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಅಡ್ಡಮತದಾನದ ಬಗ್ಗೆ ಚರ್ಚೆ ಮಾಡಿ ತಪ್ಪಿತಸ್ಥರಿಗೆ ಬುದ್ಧಿ ಕಲಿಸುತ್ತೇವೆ. ಕೇಂದ್ರದ ನಾಯಕರ ಜೊತೆ ಗಂಭೀರವಾಗಿ ಚರ್ಚೆ ನಡೆಸಿ ಬಳಿಕ ಕ್ರಮ ಕೈಗೊಳ್ಳುತ್ತೇವೆ. ಈ ಜನ್ಮದಲ್ಲಿ ಚುನಾವಣೆ ನಿಲ್ಲಬಾರದು ಹಾಗೇ ಮಾಡ್ತೀವಿ ಎಂದು ಖಡಕ್ ಆಗಿ ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 21, 2026 03:13 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More