ಸಮಯ ಬಂದಾಗ ಪ್ರಾಸಿಕ್ಯೂಷನ್ ಮತ್ತು ರಾಜಭವನ ಚಲೋ ಬಗ್ಗೆ ಮಾತಾಡುವೆ: ಹೆಚ್ ಡಿ ದೇವೇಗೌಡ

ಅರುಣ್​ ಕುಮಾರ್​ ಬೆಳ್ಳಿ

Updated on: Aug 31, 2024 | 4:30 PM

ದೇವೇಗೌಡರು ದೇವಸ್ಥಾನದ ಪಕ್ಕದಲ್ಲೇ ಪತ್ರಿಕಾ ಗೋಷ್ಠಿ ನಡೆಸಿದ್ದರಿಂದ ಮತ್ತು ಪೂಜೆಗೆಂದು ಬಂದ ಭಕ್ತರ ಸಂಖ್ಯೆ ಹೆಚ್ಚಿದ್ದ ಕಾರಣ ಗದ್ದಲದಲ್ಲಿ ಗೌಡರು ಮಾತಾಡಿದ್ದು ಸರಿಯಾಗಿ ಕೇಳಿಸುವುದಿಲ್ಲ. ಮುಂಬರುವ ದಿನಗಳಲ್ಲಿ ಅವರು ರಾಜ್ಯದ ಉದ್ದಕ್ಕೂ ಪ್ರವಾಸ ಮಾಡುವುದಾಗಿ ಹೇಳಿದರು.

ಹಾಸನ: ಶ್ರಾವಣ ಮಾಸದ ಕೊನೇ ಶನಿವಾರ ಹಿನ್ನೆಲೆಯಲ್ಲಿ ಜಿಲ್ಲೆಯ ಮಾವಿನಕೆರೆಯಲ್ಲಿರುವ ರಂಗನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕುಮಾರಸ್ವಾಮಿ ವಿರುದ್ಧ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿರುವ ಬಗ್ಗೆಕ ಪ್ರಶ್ನೆ ಕೇಳಿದಾಗ, ಇದುವರೆಗೆ ತಾನು ಅದರ ಬಗ್ಗೆ ಮಾತಾಡಿಲ್ಲ ಆದರೆ ಸಮಯ ಬಂದಾಗ ಮಾತಾಡುವುದಾಗಿ ಹೇಳಿದರು. ಕೆಲ ದಿನಗಳ ನಂತರ ಹಾಸನ ಜಿಲ್ಲೆಯಲ್ಲಿ ಓಡಾಡಿ ಪಕ್ಷವನ್ನು ಪುನಶ್ಚೇತನಗೊಳಿಸುವುದಾಗಿಯೂ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದೆಹಲಿ ಮೆಟ್ರೋದಲ್ಲಿ ಹೆಚ್​ಡಿ ದೇವೇಗೌಡ ಪ್ರಯಾಣ: ಬಹುದಿನದ ಆಸೆ ನೆರವೇರಿತು ಎಂದ ಮಾಜಿ ಪ್ರಧಾನಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.