Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆದು ಪುನಃ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ: ಬಿಎಸ್ ಯಡಿಯೂರಪ್ಪ

ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆದು ಪುನಃ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ: ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ
|

Updated on:Feb 27, 2025 | 2:22 PM

ರಾಜ್ಯದಲ್ಲಿ ಅಡಳಿತ ನಡೆಸುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವವರೆಗೆ ತಾನು ವಿಶ್ರಮಿಸಲಾರೆ ಎಂದು ಯಡಿಯೂರಪ್ಪ ಹೇಳುತ್ತಾರೆ. ರಾಜ್ಯದಲ್ಲಿರುವ ಎಲ್ಲ ಕಾರ್ಯಕರ್ತರನ್ನ ಹುರಿದುಂಬಿಸಬೇಕಿದೆ, ಪಕ್ಷವನ್ನು ಪುನಶ್ಚೇತನಗೊಳಿಸಿ ಆಧಿಕಾರಕ್ಕೆ ತರುವುದು ನಿಶ್ಚಿತ ಎಂದು ಯಡಿಯೂರಪ್ಪ ಹೇಳಿದರು. ಸಂಸದ ಬಸವರಾಜ ಬೊಮ್ಮಾಯಿ ಮತ್ತು ವಿಪಕ್ಷ ನಾಯಕ ಯಡಿಯೂರಪ್ಪರೊಂದಿಗಿದ್ದರು.

ಬೆಂಗಳೂರು, ಫೆ 27: ಭಾರೀ ಗಾತ್ರದ ತಮ್ಮ ಹುಟ್ಟುಹಬ್ಬದ ಕೇಕ್ (birthday cake) ಕಟ್ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತಾಡಿದ ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ, ತಮ್ಮ ಹುಟ್ಟುಹಬ್ಬದ ನಿಮಿತ್ತ ರಾಜ್ಯದ ಎಲ್ಲ ಭಾಗಗಳಲ್ಲಿ ಪೂಜೆ ಪುನಸ್ಕಾರಗಳನ್ನು ಮಾಡಿ ಶುಭಕೋರಿರುವ ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು. ವಯಸ್ಸು 83 ಅದರೂ ಮನೆಯಲ್ಲಿ ಕೂರುವ ಜಾಯಮಾನ ತನ್ನದಲ್ಲ ರಾಜ್ಯದ ಉದ್ದಗಲಕ್ಕೆ ಪ್ರವಾಸ ಮಾಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಪುನಃ ಅಧಿಕಾರಕ್ಕೆ ತರುವ ಕೆಲಸ ಮಾಡುವುದಾಗಿ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಹಳ ದಿನಗಳ ನಂತರ ಹುಟ್ಟೂರು ಬೂಕನಕೆರೆಗೆ ಭೇಟಿ ನೀಡಿ ದೇವಸ್ಥಾನದ ಕಾಮಗಾರಿ ವೀಕ್ಷಿಸಿದ ಬಿಎಸ್ ಯಡಿಯೂರಪ್ಪ

Published on: Feb 27, 2025 02:21 PM