ಚಾಮುಂಡಿ ಬೆಟ್ಟದಲ್ಲಿ ‘ವಿಂಡೋ ಸೀಟ್’ ಬಳಗ: ಗೆಲುವಿಗಾಗಿ ನಾಡದೇವತೆಗೆ ಪೂಜೆ ಸಲ್ಲಿಸಿದ ಚಿತ್ರತಂಡ
ಜುಲೈ 1ರಂದು ‘ವಿಂಡೋ ಸೀಟ್’ ಸಿನಿಮಾ ಬಿಡುಗಡೆ ಆಗಲಿದೆ. ಈ ನಡುವೆ ಚಿತ್ರತಂಡದ ಸದಸ್ಯರು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾರೆ.
ನಟಿ, ನಿರೂಪಕಿ ಆಗಿ ಗುರುತಿಸಿಕೊಂಡ ಶೀತಲ್ ಶೆಟ್ಟಿ (Sheetal Shetty) ಅವರು ‘ವಿಂಡೋ ಸೀಟ್’ ಚಿತ್ರಕ್ಕೆ ಮೊದಲ ಬಾರಿಗೆ ಆ್ಯಕ್ಷನ್-ಕಟ್ ಹೇಳುವ ಮೂಲಕ ನಿರ್ದೇಶಕಿ ಆಗಿದ್ದಾರೆ. ಈ ಸಿನಿಮಾಗೆ ‘ರಂಗಿತರಂಗ’ ಖ್ಯಾತಿಯ ನಟ ನಿರೂಪ್ ಭಂಡಾರಿ ಹೀರೋ. ಅವರ ಜೊತೆ ಅಮೃತಾ ಅಯ್ಯಂಗಾರ್, ಸಂಜನಾ ಆನಂದ್ ನಾಯಕಿಯರಾಗಿ ನಟಿಸಿದ್ದಾರೆ. ಜುಲೈ 1ರಂದು ‘ವಿಂಡೋ ಸೀಟ್’ (Window Seat) ಬಿಡುಗಡೆ ಆಗಲಿದೆ. ಈಗಾಗಲೇ ಟ್ರೇಲರ್ ಮೂಲಕ ಈ ಚಿತ್ರ ನಿರೀಕ್ಷೆ ಮೂಡಿಸಿದೆ. ಪ್ರಚಾರ ಕಾರ್ಯ ಕೂಡ ಭರದಿಂದ ಸಾಗುತ್ತಿದೆ. ಈ ನಡುವೆ ಚಿತ್ರತಂಡದ ಸದಸ್ಯರು ಚಾಮುಂಡಿ ಬೆಟ್ಟಕ್ಕೆ (Chamundi Hills) ತೆರಳಿದ್ದಾರೆ. ಸಿನಿಮಾ ಬಿಡುಗಡೆಯ ಹೊಸ್ತಿಲಿನಲ್ಲಿ ನಾಡದೇವತೆಗೆ ಪೂಜೆ ಸಲ್ಲಿಸಿ, ಗೆಲುವಿಗಾಗಿ ಪ್ರಾರ್ಥಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಜಾಕ್ ಮಂಜು ಬಂಡವಾಳ ಹೂಡಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Jun 17, 2022 01:47 PM
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ

