ಚಾಮುಂಡಿ ಬೆಟ್ಟದಲ್ಲಿ ‘ವಿಂಡೋ ಸೀಟ್​’ ಬಳಗ: ಗೆಲುವಿಗಾಗಿ ನಾಡದೇವತೆಗೆ ಪೂಜೆ ಸಲ್ಲಿಸಿದ ಚಿತ್ರತಂಡ

| Updated By: ಮದನ್​ ಕುಮಾರ್​

Updated on: Jun 17, 2022 | 1:47 PM

ಜುಲೈ 1ರಂದು ‘ವಿಂಡೋ ಸೀಟ್​’ ಸಿನಿಮಾ ಬಿಡುಗಡೆ ಆಗಲಿದೆ. ಈ ನಡುವೆ ಚಿತ್ರತಂಡದ ಸದಸ್ಯರು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾರೆ.

ನಟಿ, ನಿರೂಪಕಿ ಆಗಿ ಗುರುತಿಸಿಕೊಂಡ ಶೀತಲ್ ಶೆಟ್ಟಿ (Sheetal Shetty) ಅವರು ‘ವಿಂಡೋ ಸೀಟ್​’ ಚಿತ್ರಕ್ಕೆ ಮೊದಲ ಬಾರಿಗೆ ಆ್ಯಕ್ಷನ್-ಕಟ್ ಹೇಳುವ ಮೂಲಕ ನಿರ್ದೇಶಕಿ ಆಗಿದ್ದಾರೆ. ಈ ಸಿನಿಮಾಗೆ ‘ರಂಗಿತರಂಗ’ ಖ್ಯಾತಿಯ ನಟ ನಿರೂಪ್​ ಭಂಡಾರಿ ಹೀರೋ. ಅವರ ಜೊತೆ ಅಮೃತಾ ಅಯ್ಯಂಗಾರ್​, ಸಂಜನಾ ಆನಂದ್​ ನಾಯಕಿಯರಾಗಿ ನಟಿಸಿದ್ದಾರೆ. ಜುಲೈ 1ರಂದು ‘ವಿಂಡೋ ಸೀಟ್​’ (Window Seat) ಬಿಡುಗಡೆ ಆಗಲಿದೆ. ಈಗಾಗಲೇ ಟ್ರೇಲರ್​ ಮೂಲಕ ಈ ಚಿತ್ರ ನಿರೀಕ್ಷೆ ಮೂಡಿಸಿದೆ. ಪ್ರಚಾರ ಕಾರ್ಯ ಕೂಡ ಭರದಿಂದ ಸಾಗುತ್ತಿದೆ. ಈ ನಡುವೆ ಚಿತ್ರತಂಡದ ಸದಸ್ಯರು ಚಾಮುಂಡಿ ಬೆಟ್ಟಕ್ಕೆ (Chamundi Hills) ತೆರಳಿದ್ದಾರೆ. ಸಿನಿಮಾ ಬಿಡುಗಡೆಯ ಹೊಸ್ತಿಲಿನಲ್ಲಿ ನಾಡದೇವತೆಗೆ ಪೂಜೆ ಸಲ್ಲಿಸಿ, ಗೆಲುವಿಗಾಗಿ ಪ್ರಾರ್ಥಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಜಾಕ್ ಮಂಜು ಬಂಡವಾಳ ಹೂಡಿದ್ದು, ಅರ್ಜುನ್​ ಜನ್ಯ ಸಂಗೀತ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

Published on: Jun 17, 2022 01:47 PM