Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣದಲ್ಲಿ ಗೆಲುವಿನ ಅಂತರ ಕಡಿಮೆಯಾದರೂ ಕಾಂಗ್ರೆಸ್ ಅಭ್ಯರ್ಥಿಯೇ ಗೆಲ್ಲೋದು: ಶಿವಲಿಂಗೇಗೌಡ

ಚನ್ನಪಟ್ಟಣದಲ್ಲಿ ಗೆಲುವಿನ ಅಂತರ ಕಡಿಮೆಯಾದರೂ ಕಾಂಗ್ರೆಸ್ ಅಭ್ಯರ್ಥಿಯೇ ಗೆಲ್ಲೋದು: ಶಿವಲಿಂಗೇಗೌಡ

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 21, 2024 | 4:40 PM

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಎಕ್ಸಿಟ್ ಪೋಲ್ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಲಿಂಗೇಗೌಡರು, ಎಕ್ಸಿಟ್ ಪೋಲ್ ಗಳ ಬಗ್ಗೆ ತನಗೆ ನಂಬಿಕೆಯಿಲ್ಲ, ಇನ್ನೆರಡು ದಿನಗಳಲ್ಲಿ ಫಲಿತಾಂಶವೇ ಹೊರಬೀಳಲಿದೆ, ಯಾಕೆ ಅವಸರಪಡೋದು ಅಂತ ಹೇಳಿದರು.

ಹಾಸನ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಗೆಲುವಿನ ಅಂತರ ಬಹಳವಿರಲಾರದು, ಆದರೆ ಕಾಂಗ್ರೆಸ್ ಅಭ್ಯರ್ಥಿ ಕನಿಷ್ಟ ಐದರಿಂದ ಹತ್ತು ಸಾವಿರ ಮತಗಳ ಅಂತರದಿಂದ ಗೆದ್ದೇ ಗೆಲ್ಲುತ್ತಾರೆ ಎಂದು ಅರಸೀಕೆರೆ ಕಾಂಗ್ರೆಸ್ ಶಾಸಕ ಕೆಎಂ ಶಿವಲಿಂಗೇಗೌಡ ಹೇಳಿದರು. ಪಕ್ಷದ ಅಭ್ಯರ್ಥಿ ಸಿಪಿ ಯೋಗೇಶ್ವರ್ ಯಾಕೆ ನಿರಾಸೆಯಿಂದ ಮಾತಾಡಿದರೋ ಗೊತ್ತಿಲ್ಲ, ಅದರೆ ತಾನು ಖುದ್ದು ಕ್ಷೇತ್ರದಲ್ಲಿ ಓಡಾಡಿದ್ದೇನೆ, ಯೋಗೇಶ್ವರ್ ಗೆಲ್ಲೋದ್ರಲ್ಲಿ ಅನುಮಾನ ಬೇಡ ಎಂದು ಶಿವಲಿಂಗೇಗೌಡ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಉಪಚುನಾವಣೆ ಚುನಾವಣೋತ್ತರ ಸಮೀಕ್ಷೆ: NDA, ಕೈಗೆ ಎಷ್ಟು ಸ್ಥಾನ?