ಚಳ್ಳಕೆರೆ ಶಾಲೆ ಆವರಣದಲ್ಲಿ ವಾಮಾಚಾರ: ತಲೆ ಬುರುಡೆ, ಲಿಂಬೆ ಹಣ್ಣು, ಎಲೆ ಅಡಿಕೆ, ಕುಂಕುಮ ಪತ್ತೆ -ಆತಂಕ

Edited By:

Updated on: Sep 23, 2023 | 9:59 AM

Chitradurga: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತಿಮ್ಮಪ್ಪನಹಳ್ಳಿಯ ಸರ್ಕಾರಿ ಶಾಲೆ ಆವರಣದಲ್ಲಿ ಕಿಡಗೇಡಿಗಳು ವಾಮಾಚಾರ ನಡೆಸಿದ್ದಾರೆ. ಸರ್ಕಾರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕರ ಕೊಠಡಿ ಬಳಿ ವಾಮಾಚಾರ (witchcraft, superstition) ನಡೆದಿದೆ.

ಚಿತ್ರದುರ್ಗ, ಸೆಪ್ಟೆಂಬರ್​​ 23 : ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ (Chitradurga district Challakere taluk) ತಿಮ್ಮಪ್ಪನಹಳ್ಳಿಯ ಸರ್ಕಾರಿ ಶಾಲೆ ಆವರಣದಲ್ಲಿ ಕಿಡಗೇಡಿಗಳು ವಾಮಾಚಾರ ನಡೆಸಿದ್ದಾರೆ. ಸರ್ಕಾರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕರ ಕೊಠಡಿ ಬಳಿ ವಾಮಾಚಾರ (witchcraft, superstition) ನಡೆದಿದೆ. ತಲೆ ಬುರುಡೆ, ಲಿಂಬೆ ಹಣ್ಣು, ಎಲೆ ಅಡಿಕೆ, ಕುಂಕುಮ ಪತ್ತೆಯಾಗಿದ್ದು, ಶಾಲೆಗೆ (school) ಆಗಮಿಸಿದ ವಿದ್ಯಾರ್ಥಿಗಳು, ‌ಸಿಬ್ಬಂದಿಗೆ ಆತಂಕ (Panic) ಮೂಡಿದೆ.

ಮುಖ್ಯ ಶಿಕ್ಷಕಿ ಮತ್ತು ಸಿಬ್ಬಂದಿಯನ್ನು ಬೆದರಿಸಲು ವಾಮಾಚಾರ ನಡೆಸಿರುವ ಸಾಧ್ಯತೆಯಿದೆ. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ. ತಿಮ್ಮಪ್ಪನಹಳ್ಳಿ ಶಾಲೆಗೆ ತಳಕು ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಾಮಾಚಾರಕ್ಕೆ ಬಳಸಿದ ಬುರುಡೆ ಇತರೆ ವಸ್ತುಗಳನ್ನು ಸ್ಥಳದಿಂದ ತೆರವುಗೊಳಿಸಲಾಗಿದೆ.

ಇದನ್ನೂ ಓದಿ: ಹೊಳೆನರಸೀಪುರ: ಖಬರಸ್ತಾನದಲ್ಲಿ ಜೀವಂತ ವ್ಯಕ್ತಿಗಳ ಫೋಟೋ ಇಟ್ಟು ಮಾಟಮಂತ್ರ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 23, 2023 09:58 AM
Follow Us
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More