ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಸಂಪೂರ್ಣ ಭರವಸೆಯಿಟ್ಟು ಬಿಜೆಪಿಗೆ ಬೆಂಬಲ ಘೋಷಿಸುತ್ತಿದ್ದೇನೆ: ಸುಮಲತಾ ಅಂಬರೀಶ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 10, 2023 | 3:13 PM

ಪ್ರಧಾನಿ ಮೋದಿಯವರಿಂದಾಗೇ ನಾವು ವಿದೇಶಗಳಲ್ಲೂ ತಲೆಯೆತ್ತಿ ತಿರುಗಾಡುಂತಾಗಿದೆ, ಕೇವಲ ಅವರಿಂದ ಮಾತ್ರ ದೇಶದ ಪ್ರಗತಿ ಸಾಧ್ಯ, ಅವರ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇಟ್ಟು ಬೆಂಬಲ ನೀಡುತ್ತಿದ್ದೇನೆ ಎಂದು ಅವರು ಹೇಳಿದರು.

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರು ಅಂತಿಮವಾಗಿ ಬಿಜೆಪಿಗೆ (BJP) ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಟಿ ಉದ್ದೇಶಿಸಿ ಮಾತಾಡಿದ ಅವರು ಇನ್ನು ಮುಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ನೇತೃತ್ವದ ಬಿಜೆಪಿಯನ್ನು ಬೆಂಬಲಿಸುವುದಾಗಿ ಹೇಳಿದರು. ಪ್ರಧಾನಿ ಮೋದಿಯವರಿಂದಾಗೇ ನಾವು ವಿದೇಶಗಳಲ್ಲೂ ತಲೆಯೆತ್ತಿ ತಿರುಗಾಡುಂತಾಗಿದೆ, ಕೇವಲ ಅವರಿಂದ ಮಾತ್ರ ದೇಶದ ಪ್ರಗತಿ ಸಾಧ್ಯ, ಅವರ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇಟ್ಟು ಬೆಂಬಲ ನೀಡುತ್ತಿದ್ದೇನೆ ಎಂದು ಅವರು ಹೇಳಿದರು. ಆದರೆ, ಅವರು ಈಗಲೇ ಪಕ್ಷಕ್ಕೆ ಸೇರ್ಪಡೆಯಾಗುತ್ತಿಲ್ಲ, ಈ ಬಾರಿಯ ಸಂಸತ್ತಿನ ಅವಧಿ ಮುಗಿಯುವವರೆಗೆ ಅವರು ಸಂಸದರಾಗಿ ಮುಂದುವರಿಯಲಿದ್ದಾರೆ. ಪ್ರಧಾನಿ ಮೋದಿಯವರ ಸ್ವಚ್ಛತಾ ಅಭಿಯಾನದಡಿ ಮಂಡ್ಯವನ್ನು ಎಲ್ಲ ರೀತಿಯಿಂದ ಸ್ವಚ್ಛಗೊಳಿಸುವುದಾಗಿ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 10, 2023 03:09 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.