ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಹೊಳೆನರಸೀಪುರದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ

Edited By:

Updated on: Jul 13, 2026 | 9:37 AM

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಬ್ಬೂರು ಸಮೀಪ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 7 ಕೆಜಿ ಗಾಂಜಾ, ಒಂದು ಸ್ಕೂಟಿ ಹಾಗೂ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಆರೋಪಿ ಮಹಿಳೆ ಮೈಸೂರಿನ ಕೆ.ಆರ್.ನಗರ ತಾಲೂಕಿನ ಮೇಲೂರು ಗ್ರಾಮದಾಕೆ.

ಹಾಸನ, ಜುಲೈ 13: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಬ್ಬೂರು ಗ್ರಾಮದ ಸಮೀಪ ಸ್ಕೂಟಿಯಲ್ಲಿ ಬಂದು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮಹಿಳೆಯನ್ನು ಹಳ್ಳಿಮೈಸೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಮೇಲೂರು ಗ್ರಾಮದ ನಿವಾಸಿ ಶೀಲಾ ಎಂದು ಗುರುತಿಸಲಾಗಿದೆ. ಪೊಲೀಸರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಹಳ್ಳಿಮೈಸೂರು ಠಾಣೆ ಪೊಲೀಸರು ಕಬ್ಬೂರು ಸಮೀಪ ದಾಳಿ ನಡೆಸಿದ್ದರು. ಈ ವೇಳೆ ಒಬ್ಬ ಆರೋಪಿ ಕಾರಿನಲ್ಲಿ ಬಂದಿದ್ದರೆ, ಮಹಿಳೆ ಸ್ಕೂಟಿಯಲ್ಲಿ ಬಂದು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದರೆಂಬುದು ಬೆಳಕಿಗೆ ಬಂದಿದೆ.

ಪೊಲೀಸರು ದಾಳಿ ನಡೆಸುತ್ತಿದ್ದಂತೆ ಜಬೀ ಎಂಬ ಆರೋಪಿ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳದಲ್ಲಿದ್ದ ಶೀಲಾಳನ್ನು ಪೊಲೀಸರು ಬಂಧಿಸಿ, ಆಕೆಯ ಬಳಿಯಿದ್ದ 7 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇದೇ ವೇಳೆ ಸ್ಕೂಟಿ ಹಾಗೂ ಕಾರನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ. ಪರಾರಿಯಾಗಿರುವ ಆರೋಪಿ ಜಬೀಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದೆ. ಹಳ್ಳಿಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More