ಕಂಠಪೂರ್ತಿ ಕುಡಿದು ಯುವತಿ ಕಾರು ಚಾಲನೆ; ಪ್ರಶ್ನೆ ಮಾಡಿದ ಆಟೋ ಚಾಲಕನ ಮೈ ಕೈ ಪರಚಿ ಗಾಯ
ಬೆಂಗಳೂರಿನ ಸದಾಶಿವನಗರ ರಸ್ತೆಯಲ್ಲಿ ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದನ್ನು ಪ್ರಶ್ನೆ ಮಾಡಿದಕ್ಕೆ ಯುವತಿ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಯುವತಿ ಆಟೋ ಚಾಲಕನ ಮೈ-ಕೈ ಪರಚಿ ಗಾಯಗೊಳಿಸಿದ್ದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾಳೆ. ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು, ಮಾರ್ಚ್.27: ಕಂಠಪೂರ್ತಿ ಕುಡಿದು ಕಾರು ಚಲಾಯಿಸಿ ಯುವತಿ ನಡುರಸ್ತೆಯಲ್ಲಿ ರಂಪಾಟ ಮಾಡಿರುವ ಘಟನೆ ಬೆಂಗಳೂರಿನ ಸದಾಶಿವನಗರ ರಸ್ತೆಯಲ್ಲಿ ಕಳೆದ ರಾತ್ರಿ ನಡೆದಿದೆ. ಅಲ್ಲದೆ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸುವ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಯುವತಿ ಆಟೋ ಚಾಲಕನ ಮೈ ಕೈ ಪರಚಿ ಗಾಯಪಡಿಸಿದ್ದಾಳೆ. ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಂಠಪೂರ್ತಿ ಕುಡಿದು ಯುವತಿಯೋರ್ವಳು ಅಡ್ಡಾದಿಡ್ಡಿ ವಾಹನ ಚಲಾಯಿಸುತ್ತಿದ್ದಳು. ಆಟೋ ಚಾಲಕ ನಿಶಾಂತ್ ಎಂಬುವವರು ಅಡ್ಡಾದಿಡ್ಡಿ ವಾಹನ ಚಾಲನೆ ಬಗ್ಗೆ ಪ್ರಶ್ನಿಸಿದಕ್ಕೆ ಯುವತಿ ಹಾಗೂ ಯುವತಿ ಜೊತೆಯಿದ್ದ ಯುವಕ ಇಬ್ಬರೂ ಆಟೋ ಚಾಲಕನ ಜೊತೆ ಗಲಾಟೆಗೆ ಇಳಿದಿದ್ದಾರೆ. ಈ ವೇಳೆ ಯುವತಿ ನಿಶಾಂತ್ ಮೇಲೆ ಹಲ್ಲೆ ನಡೆಸಿದ್ದಾಳೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ. ಅಷ್ಟೇ ಅಲ್ಲದೆ ಆಟೋ ಡ್ರೈವರ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾಳೆ. ಆಟೋ ಚಾಲಕನ ಮೈಕೈ ಪರಚಿ ಗಾಯಪಡಿಸಿರುವ ಯುವತಿಯ ಹಲ್ಲೆ ನಡೆಸುತ್ತಿರುವ ವಿಡಿಯೋ ಟಿವಿ9ಗೆ ಲಭ್ಯವಾಗಿದೆ. ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ