ಮಹಿಳೆಯನ್ನ ಅರೆಬೆತ್ತಲೆಗೊಳಿಸಿ ಹಲ್ಲೆ: ಒಂದೂವರೆ ವರ್ಷದ ಹಿಂದನ ವಿಡಿಯೋ ಈಗ ವೈರಲ್
ಮಹಿಳೆಯನ್ನ ಅರೆಬೆತ್ತಲೆಗೊಳಿಸಿ ಅಮಾನುಷವಾಗಿ ಹಲ್ಲೆ ನಡೆಸಿರುವ ವಿಡಿಯೋವೊಂದು ವೈರಲ್ ಆಗಿದೆ. ಇದು ಕಳೆದ ಒಂದೂವರೆ ವರ್ಷದ ಹಿಂದಿನ ವಿಡಿಯೋ ಆಗಿದ್ದು, ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗೋಣಿಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿತ್ತು. ಆಸ್ತಿ ವಿಚಾರವಾಗಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಲಾಗಿತ್ತು.
ದಾವಣಗೆರೆ, ಅಕ್ಟೋಬರ್ 29: ಮಹಿಳೆಯನ್ನ ಅರೆಬೆತ್ತಲೆಗೊಳಿಸಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆಯ ಒಂದೂವರೆ ವರ್ಷದ ಹಿಂದಿನ ವಿಡಿಯೋವೊಂದು ಈಗ ವೈರಲ್ (Viral) ಆಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗೋಣಿಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದ್ದು, ಆಸ್ತಿ ವಿಚಾರವಾಗಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಗುರುಮೂರ್ತಿ ಎಂಬವರ ಪತ್ನಿ ಮೇಲೆ ಮಹಿಳೆಯರು ಮನಬಂದಂತೆ ತಳಿಸಿರುವುದನ್ನು ವಿಡಿಯೋದಲ್ಲಿ ಗಮನಿಸಿಸಬಹುದಾಗಿದೆ. ವಿಕಲಾಂಗ ಪತಿ ಗುರುಮೂರ್ತಿ ಎದುರಿಗೇ ಮಹಿಳೆ ಮೇಲೆ ಹಲ್ಲೆ ನಡೆಸಲಾಗಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಹಲ್ಲೆಯ ಬಗ್ಗೆ ದೂರು ನೀಡಲು ಹೋದರೆ ಚನ್ನಗಿರಿ ಪೊಲೀಸರು ಇದುವರೆಗೂ ಕೇಸ್ ಪಡೆದಿಲ್ಲ ಎಂಬ ಆರೋಪವೂ ಕೇಳಿಬಂದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
