ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್

ಕಾಡಿ ಬೇಡಿ ಪ್ರೀತಿಸಿ ಬಳಿಕ ಆಕೆಯೊಂದಿಗೆ ಸಪ್ತಪದಿ ತುಳಿದಿದ್ದ ಪತಿರಾಯ ಪವನ್ ಇದೀಗ ಮತ್ತೊಂದು ಮದುವೆಯಾಗಿದ್ದಾನೆ. ಇದರಿಂದ ಪ್ರೀತಿಯನ್ನು ನಂಬಿ ಪವನ್ ನನ್ನು ಮದುವೆಯಾಗಿದ್ದ ಪಂಕಜಾಳಿಗೆ ದಿಕ್ಕುತೋಚದಂತಾಗಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡಬನಕಟ್ಟೆ ಗ್ರಾಮದ ಪಂಕಜಾ ಬಾಲಕಿ ಆಗಿದ್ದಾಗಲೇ ಅದೇ ಗ್ರಾಮದ ಪವನ್ ಪ್ರೀತ್ಸೆ ಪ್ರೀತ್ಸೆ ಎಂದು ಬೆನ್ನುಬಿದ್ದಿದ್ದ. ಬಳಿಕ ಪಂಕಜಾಳನ್ನು ನಂಬಿಸಿ ವಿವಾಹವಾಗಿ‌ ಚಿತ್ರದುರ್ಗದಲ್ಲಿ ಮನೆ ಮಾಡಿದ್ದ.

ಚಿತ್ರದುರ್ಗ, (ಜುಲೈ 08): ಕಾಡಿ ಬೇಡಿ ಪ್ರೀತಿಸಿ ಬಳಿಕ ಆಕೆಯೊಂದಿಗೆ ಸಪ್ತಪದಿ ತುಳಿದಿದ್ದ ಪತಿರಾಯ ಪವನ್ ಇದೀಗ ಮತ್ತೊಂದು ಮದುವೆಯಾಗಿದ್ದಾನೆ. ಇದರಿಂದ ಪ್ರೀತಿಯನ್ನು ನಂಬಿ ಪವನ್ ನನ್ನು ಮದುವೆಯಾಗಿದ್ದ ಪಂಕಜಾಳಿಗೆ ದಿಕ್ಕುತೋಚದಂತಾಗಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡಬನಕಟ್ಟೆ ಗ್ರಾಮದ ಪಂಕಜಾ ಬಾಲಕಿ ಆಗಿದ್ದಾಗಲೇ ಅದೇ ಗ್ರಾಮದ ಪವನ್ ಪ್ರೀತ್ಸೆ ಪ್ರೀತ್ಸೆ ಎಂದು ಬೆನ್ನುಬಿದ್ದಿದ್ದ. ಬಳಿಕ ಪಂಕಜಾಳನ್ನು ನಂಬಿಸಿ ವಿವಾಹವಾಗಿ‌ ಚಿತ್ರದುರ್ಗದಲ್ಲಿ ಮನೆ ಮಾಡಿದ್ದ. ಆದ್ರೆ, ನಾಲ್ಕು ವರ್ಷದಲ್ಲೇ ಕುಟುಂಬದವರ ಜತೆ ಸೇರಿಕೊಂಡು ವರದಕ್ಷಿಣೆ ಕಿರುಕುಳ ಆರಂಭಿಸಿದ್ದಾನೆ. ಆಗಾಗ ಹೊಡೆದು ಬಡಿದು ಮಾಡಿ ದೌರ್ಜನ್ಯ ಎಸಗಿದ್ದಾಬೆ. ಅಲ್ಲದೇ ಮೂರು ತಿಂಗಳ ಹಿಂದಷ್ಟೇ ಮತ್ತೊಬ್ಬಳ ಜತೆ ಪವನ್ ಮದುವೆ ಆಗಿದ್ದಾನಂತೆ. ನಿನ್ನೆಯಷ್ಟೇ ವಿಷಯ ತಿಳಿದ ಪಂಕಜಾ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯ ಪಂಕಜಾಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ನ್ಯಾಯಕ್ಕಾಗಿ ಪೊಲೀಸರಿಗೆ ಮನವಿ ಮಾಡಿದ್ದಾಳೆ.

Published On - 10:00 pm, Tue, 8 July 25

ಬಸವರಾಜ ಮುದನೂರ್, ಚಿತ್ರದುರ್ಗ

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us