ಚಿಕ್ಕಬಳ್ಳಾಪುರ: ಬಸ್ ಹತ್ತುವ ವೇಳೆ ಮಾಂಗಲ್ಯ ಚೈನ್ ಕದ್ದು ಸಿಕ್ಕಿಬಿದ್ದ ಕಳ್ಳಿ
ಜನಸಂದಣಿಯನ್ನೇ ಬಂಡವಾಳವನ್ನಾಗಿ ಮಾಡಿಕೊಂಡ ಮಹಿಳೆಯೊಬ್ಬಳು ಮಾಂಗಲ್ಯ ಸರ ಕಳವು ಮಾಡಿ ಸಿಕ್ಕಿಬಿದ್ದ ಘಟನೆ ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ: ಜನಸಂದಣಿಯನ್ನೇ ಬಂಡವಾಳವನ್ನಾಗಿ ಮಾಡಿಕೊಂಡ ಮಹಿಳೆಯೊಬ್ಬಳು ಮಾಂಗಲ್ಯ ಸರ ಕಳವು ಮಾಡಿ ಸಿಕ್ಕಿಬಿದ್ದ ಘಟನೆ ಚಿಕ್ಕಬಳ್ಳಾಪುರ (Chikkaballapura) ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಸರಗಳ್ಳತನಕ್ಕೆ (Chain snatching) ಯತ್ನಿಸಿದ್ದಲ್ಲದೆ, ಸಿಕ್ಕಿಬಿದ್ದಾಗ ನಾನವಳಲ್ಲ ಎಂದು ಹೈ ಡ್ರಾಮ ಮಾಡಿದ್ದಾಳೆ. ವಾರಾಂತ್ಯ ಹಿನ್ನೆಲೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇಶಾ ಪೌಂಡೇಶನ್ಗೆ ಬಂದಿದ್ದರು. ಬಸ್ ಹತ್ತುವ ವೇಳೆ ನೂಕುನುಗ್ಗಲು ಆಗುವುದನ್ನೇ ಬಂಡವಾಳ ಮಾಡಿಕೊಂಡ ಮಹಿಳೆಯೊಬ್ಬಳು, 1.75 ಲಕ್ಷ ಮೌಲ್ಯದ ಮಾಂಗಲ್ಯ ಸರ ಕಳವಿಗೆ ಯತ್ನಿಸಿದ್ದಾಳೆ. ಕೂಡಲೇ ಎಚ್ಚೆತ್ತ ತನ್ನ ಸರ ರಕ್ಷಿಸಿಕೊಂಡ ಮಹಿಳೆ, ಕಳ್ಳಿಯ ಜುಟ್ಟು ಹಿಡಿದು ಎಳೆದೊಯ್ದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ನಗರ ಠಾಣಾ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ