ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮಹಿಳೆಗೆ ಹೆರಿಗೆ: ಸರ್ಕಾರಿ ಆಸ್ಪತ್ರೆ ಅವಸ್ಥೆ ವಿಡಿಯೋ ವೈರಲ್
ಕಲ್ಯಾಣ ಕರ್ನಾಟದ ಜಿಲ್ಲೆಗಳಲ್ಲಿ ಬಹಳಷ್ಟು ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳೇ ಇಲ್ಲ. ಸರಿಯಾದ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಜೊತೆಗೆ ನೀರು ಹಾಗೂ ವಿದ್ಯುತ್ ನಂತಹ ಮೂಲಭೂತ ಸೌಕರ್ಯಗಳೇ ಇಲ್ಲ. ಇದಕ್ಕೆ ಪೂರಕವೆಂಬಂತೆ ಜನರೇಟರ್ ಕೆಟ್ಟಿದ್ದರಿಂದ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿರುವ ಘಟನೆ ರಾಯಚೂರಿನಲ್ಲಿ ಬೆಳಕಿಗೆ ಬಂದಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಘಟನೆ ನಡೆದಿದೆ.
ರಾಯಚೂರು, (ಸೆಪ್ಟೆಂಬರ್ 12): ಕಲ್ಯಾಣ ಕರ್ನಾಟದ ಜಿಲ್ಲೆಗಳಲ್ಲಿ ಬಹಳಷ್ಟು ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳೇ ಇಲ್ಲ. ಸರಿಯಾದ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಜೊತೆಗೆ ನೀರು ಹಾಗೂ ವಿದ್ಯುತ್ ನಂತಹ ಮೂಲಭೂತ ಸೌಕರ್ಯಗಳೇ ಇಲ್ಲ. ಇದಕ್ಕೆ ಪೂರಕವೆಂಬಂತೆ ಜನರೇಟರ್ ಕೆಟ್ಟಿದ್ದರಿಂದ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ( Mobile Torchlight) ಮಹಿಳೆಗೆ ಹೆರಿಗೆ ಮಾಡಿಸಿರುವ ಘಟನೆ ರಾಯಚೂರಿನಲ್ಲಿ ಬೆಳಕಿಗೆ ಬಂದಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಘಟನೆ ನಡೆದಿದೆ. ಆಸ್ಪತ್ರೆಯ ಸೌರ ಘಟಕಗಳು, ಜನರೇಟರ್ ಕೆಟ್ಟು ಹೋಗಿದ್ದರಿಂದ ರಾತ್ರಿ ವೇಳೆ ರೋಗಿಗಳಿಗೆ ಮೊಂಬತ್ತಿ ಹಾಗೂ ಮೊಬೈಲ್ ಟಾರ್ಚ್ ಮೂಲಕವೇ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚೆಗೆ ಟ್ಟಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ, ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ಹೆರಿಗೆ ಮಾಡಿಸಿದ್ದಾರೆ.ಸದ್ಯ ಈ ವಿಡಿಯೋ ವೈರಲ್ ಆಗಿದೆ.
Published on: Sep 12, 2025 02:38 PM