ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ; ವಿಡಿಯೋ ಇಲ್ಲಿದೆ
ಇಂದೋರ್‌ನಲ್ಲಿ ಬಟ್ಟೆ ಒಣಗಿಸುವಾಗ ಬ್ಯಾಲೆನ್ಸ್ ತಪ್ಪಿದ ನವವಿವಾಹಿತೆಯೊಬ್ಬಳು ಕೆಳಗೆ ಬಿದ್ದಿದ್ದಾಳೆ. ಆಕೆಗೆ 6 ತಿಂಗಳ ಹಿಂದೆ ವಿವಾಹವಾಗಿತ್ತು. ಕೆಳಗಡೆ ಇದ್ದ ಅಂಗಡಿಯ ಸಿಸಿಟಿವಿಯಲ್ಲಿ ಆಕೆ ಮೇಲಿನಿಂದ ಬೀಳುತ್ತಿರುವ ದೃಶ್ಯ ರೆಕಾರ್ಡ್ ಆಗಿದೆ. ಈ ಘಟನೆಯ ನಂತರ ಶಿಫಾ ಎಂದು ಗುರುತಿಸಲಾದ ಗಾಯಗೊಂಡ ಮಹಿಳೆಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಟ್ಟೆ ಒಣಗಿಸುವಾಗ ಆಕೆ ಜಾರಿ ಬಿದ್ದು ಸಮತೋಲನ ಕಳೆದುಕೊಂಡಿದ್ದಾಳೆ ಎಂದು ಆಕೆಯ ಕುಟುಂಬ ಕೂಡ ಪೊಲೀಸರಿಗೆ ತಿಳಿಸಿದೆ. ಪೊಲೀಸರು ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.
ಇಂದೋರ್, ಫೆಬ್ರವರಿ 16: ಇಂದೋರ್‌ನಲ್ಲಿ ಮನೆಯೊಂದರಲ್ಲಿ ಬಟ್ಟೆ ಒಣಗಿಸುವಾಗ 25 ವರ್ಷದ ಮಹಿಳೆಯೊಬ್ಬರು ತಮ್ಮ ರೂಮಿನ ಬಾಲ್ಕನಿಯಿಂದ ಕೆಳಗೆ ಬಿದ್ದ ಘಟನೆ ನಡೆದಿದೆ. ಈ ದೃಶ್ಯ ಆ ಮನೆಯ ಕೆಳಗಿನ ಮಹಡಿಯಲ್ಲಿದ್ದ ಅಂಗಡಿಯಲ್ಲಿ ಅಳವಡಿಸಲಾದ ಸಿಸಿಟಿವಿ (Viral Video) ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಬಟ್ಟೆ ಒಣಗಿಸುವಾಗ ಮಹಿಳೆ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿಫಾ ಎಂಬ ಮಹಿಳೆ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ತಮ್ಮ ಮನೆಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಬಿದ್ದಿದ್ದಾಗಿ ಆಕೆ ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಮುಖ ಮತ್ತು ಕೈಕಾಲುಗಳಿಗೆ ಗಾಯಗಳಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು


