Video: ಗರ್ಬಾ ನೃತ್ಯ ಅಭ್ಯಾಸ ಮಾಡುತ್ತಿದ್ದ ಮಹಿಳೆಯ ಬಲವಂತವಾಗಿ ಎಳೆದೊಯ್ದ ಸಂಬಂಧಿಕರು

Updated on: Sep 22, 2025 | 8:01 AM

ಗರ್ಬಾ ನೃತ್ಯ ಅಭ್ಯಾಸ ಮಾಡುತ್ತಿದ್ದ ಮಹಿಳೆಯನ್ನು ಪುರುಷರ ಗುಂಪೊಂದು ಬಲವಂತವಾಗಿ ಎಳೆದೊಯ್ದಿರುವ ಘಟನೆ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಪುರುಷರು ಮತ್ತು ಮಹಿಳೆಯರ ಗುಂಪೊಂದು ಮಹಿಳೆಯನ್ನು ಸ್ಥಳದಿಂದ ಹೊರಗೆಳೆದುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.ಪ್ರತ್ಯಕ್ಷದರ್ಶಿಗಳ ಪ್ರಕಾರ, ಮಹಿಳೆ ಕೆಲವು ತಿಂಗಳ ಹಿಂದೆ ಪುರುಷ ಸಂಗಾತಿಯೊಂದಿಗೆ ರಾಜಸ್ಥಾನದಿಂದ ಮಂದ್ಸೌರ್‌ಗೆ ತೆರಳಿದ್ದರು.ಆಕೆ ಈಗಾಗಲೇ ವಿವಾಹಿತಳಾಗಿದ್ದಳು ಆದರೆ ಪತಿ ಮತ್ತು ಕುಟುಂಬದಿಂದ ದೂರ ಇರುವ ಆಯ್ಕೆ ಮಾಡಿಕೊಂಡಿದ್ದಳು.

ಮಧ್ಯಪ್ರದೇಶ, ಸೆಪ್ಟೆಂಬರ್ 22:   ಗರ್ಬಾ ನೃತ್ಯ ಅಭ್ಯಾಸ ಮಾಡುತ್ತಿದ್ದ ಮಹಿಳೆಯನ್ನು ಸಂಬಂಧಿಕರು ಬಲವಂತವಾಗಿ ಎಳೆದೊಯ್ದಿರುವ ಘಟನೆ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಪುರುಷರು ಮತ್ತು ಮಹಿಳೆಯರ ಗುಂಪೊಂದು ಮಹಿಳೆಯನ್ನು ಸ್ಥಳದಿಂದ ಹೊರಗೆಳೆದುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.ಪ್ರತ್ಯಕ್ಷದರ್ಶಿಗಳ ಪ್ರಕಾರ, ಮಹಿಳೆ ಕೆಲವು ತಿಂಗಳ ಹಿಂದೆ ಪುರುಷ ಸಂಗಾತಿಯೊಂದಿಗೆ ರಾಜಸ್ಥಾನದಿಂದ ಮಂದ್ಸೌರ್‌ಗೆ ತೆರಳಿದ್ದರು.ಆಕೆ ಈಗಾಗಲೇ ವಿವಾಹಿತಳಾಗಿದ್ದಳು ಆದರೆ ಪತಿ ಮತ್ತು ಕುಟುಂಬದಿಂದ ದೂರ ಇರುವ ಆಯ್ಕೆ ಮಾಡಿಕೊಂಡಿದ್ದಳು, ಈ ನಿರ್ಧಾರವು ಆಕೆಯ ಸಂಬಂಧಿಕರನ್ನು ಕೆರಳಿಸಿದೆ ಎನ್ನಲಾಗಿದೆ.ಭಾವಸರ್ ಧರ್ಮಶಾಲೆಗೆ ನುಗ್ಗಿ ಆಕೆಯನ್ನು ಎಳೆದೊಯ್ದಿದ್ದಾರೆ. ಪೊಲೀಸರು ಆಕೆಯನ್ನು ರಕ್ಷಿಸಿ ಏಳು ಮಂದಿಯನ್ನು ಬಂಧಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More