ಕೆಎಸ್ಆರ್ಟಿಸಿ ಬಸ್‌ನಲ್ಲಿ ಕಂಡಕ್ಟರ್ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿ ಪೊಲೀಸ್ ಬಲೆಗೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದು, ಅದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು - ಮುಡಿಪು ಬಸ್‌ನಲ್ಲಿ ಘಟನೆ ಸಂಭವಿಸಿದ್ದು, ಇದೀಗ ಆರೋಪಿಯನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳೂರು, ಏಪ್ರಿಲ್ 24: ಮಂಗಳೂರಿನ ಮುಡಿಪು -ಸ್ಟೇಟ್ ಬ್ಯಾಂಕ್ ಭಾಗದ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದ್ದು, ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪೊಲೀಸರು, ಆರೋಪಿ ಬಾಗಲಕೋಟೆ ಮೂಲದ ಪ್ರದೀಪ್ (40) ವಶಕ್ಕೆ ಪಡೆದಿದ್ದಾರೆ. ಏಪ್ರಿಲ್ 22 ರಂದು ಮುಡಿಪುವಿನಿಂದ ಸ್ಟೇಟ್ ಬ್ಯಾಂಕ್ನತ್ತ ತೆರಳುತ್ತಿದ್ದ ಬಸ್‌ನಲ್ಲಿ ಯುವತಿ ನಿದ್ರೆಗೆ ಜಾರಿದ್ದರು. ಆ ಸಂದರ್ಭದಲ್ಲಿ ಕಂಡಕ್ಟರ್ ಆ ಯುವತಿಗೆ ಕಿರುಕುಳ ನೀಡಿದ್ದಾನೆ. ಇದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
