ಕೆಎಸ್​ಆರ್​ಟಿಸಿ ಬಸ್​ನಲ್ಲಿ ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿ ಪೊಲೀಸ್ ಬಲೆಗೆ

Updated By: Ganapathi Sharma

Updated on: Apr 24, 2025 | 12:05 PM

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದು, ಅದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು - ಮುಡಿಪು ಬಸ್​​ನಲ್ಲಿ ಘಟನೆ ಸಂಭವಿಸಿದ್ದು, ಇದೀಗ ಆರೋಪಿಯನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು, ಏಪ್ರಿಲ್ 24: ಮಂಗಳೂರಿನ ಮುಡಿಪು -ಸ್ಟೇಟ್‌ ಬ್ಯಾಂಕ್‌ ಭಾಗದ ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದ್ದು, ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪೊಲೀಸರು, ಆರೋಪಿ ಬಾಗಲಕೋಟೆ ಮೂಲದ ಪ್ರದೀಪ್‌ (40) ವಶಕ್ಕೆ ಪಡೆದಿದ್ದಾರೆ. ಏಪ್ರಿಲ್ 22 ರಂದು ಮುಡಿಪುವಿನಿಂದ ಸ್ಟೇಟ್‌ ಬ್ಯಾಂಕ್​​ನತ್ತ ತೆರಳುತ್ತಿದ್ದ ಬಸ್​​ನಲ್ಲಿ ಯುವತಿ ನಿದ್ರೆಗೆ ಜಾರಿದ್ದರು. ಆ ಸಂದರ್ಭದಲ್ಲಿ ಕಂಡಕ್ಟರ್ ಆ ಯುವತಿಗೆ ಕಿರುಕುಳ ನೀಡಿದ್ದಾನೆ. ಇದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ