AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಕಿರುಕುಳ ನೀಡಿದ ಮೂವರು ಪುಂಡರು

ಬೆಂಗಳೂರು: ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಕಿರುಕುಳ ನೀಡಿದ ಮೂವರು ಪುಂಡರು

Shivaprasad B
| Edited By: |

Updated on:Dec 27, 2025 | 11:38 AM

Share

ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ತಡರಾತ್ರಿ ಮೂವರು ಪುಂಡರು ಬೈಕ್‌ನಲ್ಲಿ ಬಂದು ಯುವತಿಗೆ ಕಿರುಕುಳ ನೀಡಿದ್ದಾರೆ. ಈ ಘಟನೆಯ ವೈರಲ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಪೊಲೀಸರು ಬೈಕ್ ಸಂಖ್ಯೆ ಪತ್ತೆ ಹಚ್ಚಿ ಮೂವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದನ್ನು ಎಕ್ಸ್​​ನಲ್ಲಿ ಹಂಚಿಕೊಳ್ಳಲಾಗಿದೆ.

ಬೆಂಗಳೂರು, ಡಿ. 27: ಬೆಂಗಳೂರಿನ ಬಿಟಿಎಂ ಲೇ ಔಟ್ ನಲ್ಲಿ ತಡರಾತ್ರಿ ಯುವತಿಗೆ ಮೂವರು ಪುಂಡರು ಕಿರುಕುಳ ನೀಡಿದ್ದಾರೆ. ಒಂದೇ ಬೈಕ್‌ನಲ್ಲಿದ್ದ ಮೂವರು ಯುವತಿಗೆ ಕಿರುಕುಳ ನೀಡಿಲಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸುಮಾರು ಎರಡು ಕಿಲೋ ರಸ್ತೆಯುದ್ದಕ್ಕೂ ಹಿಂಬಾಲಿಸಿಕೊಂಡು ಹೋಗಿದ್ದಾರೆ. ಈ ವಿಡಿಯೋದಲ್ಲಿ ತೋರಿಸಿರುವ ಪ್ರಕಾರ, ಮುಂದೆಯಿಂದ ಹೋಗುತ್ತಿದ್ದ ಯುವತಿಯನ್ನು ಹಿಂದಿನಿಂದ ಬಂದ ಮೂವರು ಒಂದೇ ಬೈಕ್​​ನಲ್ಲಿ ಫಾಲೋ ಮಾಡಿಕೊಂಡು ಬಂದಿದ್ದಾರೆ. ಜತೆಗೆ ರಸ್ತೆಯಲ್ಲಿ ಅಡ್ಡಾದಿಡ್ಡಿ ಬೈಕ್​​ನಲ್ಲಿ ಓಡಿಸಿದ್ದಾರೆ. ಈ ಪುಂಡರು ಯುವತಿಗೆ ಕಿರುಕುಳ ನೀಡುತ್ತಿರುವುದನ್ನು ಬೈಕ್​​ನ ಹಿಂದೆ ಬರುತ್ತಿದ್ದ ಕಾರು ಚಾಲಕ ವಿಡಿಯೋ ಮಾಡಿದ್ದಾರೆ. ವಿಡಿಯೋವನ್ನು ಎಕ್ಸ್​​​ನಲ್ಲಿ ಹಂಚಿಕೊಂಡು, ಬೆಂಗಳೂರು ಪೊಲೀಸರಿಗೆ ಟ್ಯಾಗ್​ ಮಾಡಿದ್ದಾರೆ. ಇದಕ್ಕೆ ಪೊಲೀಸರು ಕೂಡ ಎಕ್ಸ್​​ ಮೂಲಕವೇ ಬೈಕ್‌ ನಂಬರ್ ಪತ್ತೆ ಮಾಡಿದ್ದು, ಮೂವರನ್ನು ವಿಚಾರಣೆ ಮಾಡೋದಾಗಿ ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published on: Dec 27, 2025 11:38 AM