AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಆನ್‌ಲೈನ್‌ ಶಿಕ್ಷಣಕ್ಕಾಗಿ ಕಿವಿಯೋಲೆ ಮಾರಿದ ತಾಯಿ, ಎಲ್ಲಿ?

[lazy-load-videos-and-sticky-control id=”cvXGnUyOkgs”] ಕೊರೊನಾ ಸಂಕಷ್ಟದ ಸಮಯದಲ್ಲಿ ಶಾಲೆ ಕಾಲೇಜುಗಳು ಆನ್‌ಲೈನ್‌ ಕ್ಲಾಸ್‌ ಆರಂಭಿಸಿವೆ. ಹೀಗಾಗಿ ಮಗಳ ಆನ್‌ಲೈನ್ ಕ್ಲಾಸ್‌ಗೆ ಅಗತ್ಯವಿರುವ ಮೊಬೈಲ್ ಕೊಡಿಸಲು ಬಡ ತಾಯಿಯೊಬ್ಬಳು ತನ್ನ ಕಿವಿ ಓಲೆ ಮಾರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಶೆಡ್‌ವೊಂದರಲ್ಲಿ ವಾಸವಿರುವ ಸರೋಜಿನಿ ಬೇವಿನಕಟ್ಟಿ ಎಂಬ ದೇವದಾಸಿ ಮಹಿಳೆ ತನ್ನ ಮಗಳ ಆನ್‌ಲೈನ್ ಶಿಕ್ಷಣಕ್ಕಾಗಿ 10 ಸಾವಿರಕ್ಕೆ ತನ್ನ ಬಂಗಾರದ ಕಿವಿ ಓಲೆ ಮಾರಿದ್ದಾಳೆ. ನಿತ್ಯ ಜೀವನಕ್ಕಾಗಿ ಮನೆಗೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಈ ದೇವದಾಸಿ […]

ಮಗಳ ಆನ್‌ಲೈನ್‌ ಶಿಕ್ಷಣಕ್ಕಾಗಿ ಕಿವಿಯೋಲೆ ಮಾರಿದ ತಾಯಿ, ಎಲ್ಲಿ?
Guru
Guru| Edited By: ಸಾಧು ಶ್ರೀನಾಥ್​|

Updated on:Aug 05, 2020 | 5:47 PM

Share

[lazy-load-videos-and-sticky-control id=”cvXGnUyOkgs”]

ಕೊರೊನಾ ಸಂಕಷ್ಟದ ಸಮಯದಲ್ಲಿ ಶಾಲೆ ಕಾಲೇಜುಗಳು ಆನ್‌ಲೈನ್‌ ಕ್ಲಾಸ್‌ ಆರಂಭಿಸಿವೆ. ಹೀಗಾಗಿ ಮಗಳ ಆನ್‌ಲೈನ್ ಕ್ಲಾಸ್‌ಗೆ ಅಗತ್ಯವಿರುವ ಮೊಬೈಲ್ ಕೊಡಿಸಲು ಬಡ ತಾಯಿಯೊಬ್ಬಳು ತನ್ನ ಕಿವಿ ಓಲೆ ಮಾರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಶೆಡ್‌ವೊಂದರಲ್ಲಿ ವಾಸವಿರುವ ಸರೋಜಿನಿ ಬೇವಿನಕಟ್ಟಿ ಎಂಬ ದೇವದಾಸಿ ಮಹಿಳೆ ತನ್ನ ಮಗಳ ಆನ್‌ಲೈನ್ ಶಿಕ್ಷಣಕ್ಕಾಗಿ 10 ಸಾವಿರಕ್ಕೆ ತನ್ನ ಬಂಗಾರದ ಕಿವಿ ಓಲೆ ಮಾರಿದ್ದಾಳೆ. ನಿತ್ಯ ಜೀವನಕ್ಕಾಗಿ ಮನೆಗೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಈ ದೇವದಾಸಿ ಮಹಿಳೆ ಈಗ ದುಡಿಯಲು ಕೆಲಸವೂ ಇಲ್ಲದೆ ಪರದಾಡುತ್ತಿದ್ದಾಳೆ.

ಸಚಿವೆ ಶಶಿಕಲಾ ಜೊಲ್ಲೆ ತುರ್ತು ಗಮನಕ್ಕೆ ಆದ್ರೆ ತನ್ನ ಮಗಳು ರೇಣುಕಾಳ ಶಿಕ್ಷಣಕ್ಕೆ ತೊಂದರೆಯಾಗಬಾರದೆಂದು ಆಕೆಯ ಆನ್‌ಲೈನ್ ಶಿಕ್ಷಣಕ್ಕಾಗಿ ತನ್ನ ಬಂಗಾರದ ಕಿವಿ ಓಲೆ ಮಾರಿದ್ದಾಳೆ. ಮೂಲತಃ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದ ಸರೋಜಿನಿ ಬೆವಿನಕಟ್ಟಿ, ಹಲವು ವರ್ಷಗಳಿಂದ ಬೆಳಗಾವಿಯಲ್ಲಿ ವಾಸವಿದ್ದಾಳೆ.

ಇದ್ದ ಒಬ್ಬ ಮಗ ರೇಲ್ವೆ ಅಪಘಾತದಲ್ಲಿ ಕಾಲು ಮುರಿದುಕೊಂಡಿದ್ದು ಕೆಲಸವಿಲ್ಲದೇ ಮನೆಯಲ್ಲಿಯೇ ಇರುತ್ತಾನೆ. ಇನ್ನು ಮಗಳು ರೇಣುಕಾ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಕೊರೊನಾ ಭೀತಿ ಹಿನ್ನೆಲೆ ಮನೆಗೆಲಸಕ್ಕೂ ಕೂಡಾ ಈಗ ಯಾರೂ ಕರೆಯುತ್ತಿಲ್ಲ.

ಮನೆಮನೆಗೆ ಹೋಗಿ ಧವಸ ಧಾನ್ಯ ಬೇಡಿ ಜೀವನ ಸಾಗಿಸಲು ಅವಕಾಶ ಸಿಗುತ್ತಿಲ್ಲವೆಂದು ಕಣ್ಣೀರು ಹಾಕುತ್ತಿರುವ ಸರೋಜಿನಿ, ತನಗೆ ಸೂಕ್ತ ನೆರವು ನೀಡುವಂತೆ ಬೆಳಗಾವಿಯವರೇ ಆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸೇರಿದಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾಳೆ.

Published On - 4:31 pm, Wed, 5 August 20

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!