ಮೂರು ಮದುವೆಯಾಗಿ ಲಕ್ಷಾಂತರ ರೂ. ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ! ಹೇಳಿದ್ದೇನು ನೋಡಿ
ದೊಡ್ಡಬಳ್ಳಾಪುರ ತಾಲೂಕಿನ ಅಣಬೆ ಗ್ರಾಮದಲ್ಲಿ ಮಹಿಳೆಯೊಬ್ಬಳು ಪ್ರೀತಿಸುವ ನಾಟಕವಾಡಿ ಮೂವರು ಪುರುಷರನ್ನು ಮದುವೆಯಾಗಿ ಲಕ್ಷಾಂತರ ರೂ. ವಂಚನೆ ಮಾಡಿರುವ ಪ್ರಕರಣ ಸಂಬಂಧ ಆಕೆಯ ಎರಡನೇ ಗಂಡ ಇದೀಗ ‘ಟಿವಿ9’ ಮುಂದೆ ಅಳಲು ತೋಡಿಕೊಂಡಿದ್ದಾರೆ. ಅವರು ಹೇಳಿದ್ದೇನು? ಆಕೆ ಮಾಡಿದ್ದೇನು? ವಿಡಿಯೋ ಇಲ್ಲಿದೆ ನೋಡಿ.
ದೇವನಹಳ್ಳಿ, ಜನವರಿ 30: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅಣಬೆ ಗ್ರಾಮದ ಸುಧಾರಾಣಿ ಎಂಬ ಮಹಿಳೆ, ಪ್ರೀತಿಸುವ ನಾಟಕವಾಡಿ ಮದುವೆಯಾಗಿ ಮೂವರನ್ನು ವಂಚಿಸಿರುವುದು ಬಯಲಾಗಿದೆ. ಆಕೆ ಪ್ರೀತಿಸಿ ಮದುವೆಯಾಗಿ ಲಕ್ಷಾಂತರ ರೂಪಾಯಿ ವಂಚಿಸಿದ್ದಾಳೆ ಎಂದು ಆರೋಪಿಸಲಾಗಿದ್ದು, ಇದೀಗ ಆಕೆಯ ಮೋಸದಾಟದ ಬಗ್ಗೆ ಎರಡನೇ ಗಂಡ ಮಾಧ್ಯಮದ ಎದುರು ಮಾಹಿತಿ ಬಿಚ್ಚಿಟ್ಟಿದ್ದಾರೆ.
ಮೊದಲ ಪತಿ ತೀರಿಕೊಂಡಿದ್ದಾರೆ ಎಂದು ಸುಳ್ಳು ಹೇಳಿ ಸುಧಾರಾಣಿ ತನ್ನನ್ನು ಮದುವೆಯಾಗಿದ್ದಾರೆ. ಮದುವೆಯ ನಂತರ ಸುಮಾರು 25 ಲಕ್ಷ ರೂಪಾಯಿಗಳಷ್ಟು ಹಣವನ್ನು ತೆಗೆದುಕೊಂಡಿದ್ದಾಳೆ. ನಂತರ, ಸುಧಾರಾಣಿಗೆ ಮೊದಲ ಪತಿ ಹೀರೇಗೌಡ ಬದುಕಿರುವ ವಿಚಾರ ಗೊತ್ತಾಯಿತು ಎಂದು ಯುವಕ ತಿಳಿಸಿದ್ದಾರೆ. ಸುಧಾರಾಣಿ ಹೈದರಾಬಾದ್ಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ, ಬೆಂಗಳೂರಿನಲ್ಲಿ ಶಿವಗೌಡ ಎಂಬುವವರನ್ನು ಮೂರನೇ ಮದುವೆಯಾಗಿರುವುದೂ ನಂತರ ಗೊತ್ತಾಯಿತು ಎಂದಿರುವ ಯುವಕ, ಪೊಲೀಸರಿಗೆ ದೂರು ನೀಡಿದ್ದಾರೆ.
ವಿವರಗಳಿಗೆ ಓದಿ: ದೊಡ್ಡಬಳ್ಳಾಪುರದಲ್ಲೊಬ್ಬಳು ಖತರ್ನಾಕ್ ಮಹಿಳೆ: 3 ಮದುವೆಯಾಗಿ ಲಕ್ಷಾಂತರ ರೂ. ಲೂಟಿ, ಠಾಣೆ ಮೆಟ್ಟಿಲೇರಿದ ಗಂಡಂದಿರು!
