AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್: ನಾಪತ್ತೆಯಾಗಿದ್ದ ಮಹಿಳೆಯಿಂದ ಸ್ಫೋಟಕ ಹೇಳಿಕೆ

ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್: ನಾಪತ್ತೆಯಾಗಿದ್ದ ಮಹಿಳೆಯಿಂದ ಸ್ಫೋಟಕ ಹೇಳಿಕೆ

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Apr 13, 2026 | 1:47 PM

Share

ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅನಿರೀಕ್ಷಿತ ತಿರುವು ದೊರೆತಿದೆ. ದೂರುದಾರೆ ಮಹಿಳೆಯು ವೀಡಿಯೊ ಬಿಡುಗಡೆ ಮಾಡಿ, ತನ್ನ ಮತ್ತು ಸ್ವಾಮೀಜಿ ನಡುವೆ ಗುರು-ಭಕ್ತಿಯ ಸಂಬಂಧವಿದೆ ಎಂದು ತಿಳಿಸಿದ್ದಾರೆ. ತನ್ನ ಹೆಸರಿನಲ್ಲಿ ಬೇರೆಯವರು ದೂರು ದಾಖಲಿಸಿದ್ದಾರೆ ಹೊರತು, ತಾನು ಯಾವುದೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿಲ್ಲ ಎಂದು ಮಹಿಳೆ ಸ್ಪಷ್ಟಪಡಿಸಿದ್ದಾರೆ. ಈ ಹೇಳಿಕೆ ಪ್ರಕರಣಕ್ಕೆ ಹೊಸ ಆಯಾಮ ನೀಡಿದೆ.

ಬೆಂಗಳೂರು, ಏಪ್ರಿಲ್​​ 13: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಪ್ರಕರಣವು ಇದೀಗ ಮಹತ್ವದ ತಿರುವನ್ನು ಪಡೆದುಕೊಂಡಿದೆ. ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದ ಮಹಿಳೆಯು ಇದೀಗ ಯು-ಟರ್ನ್ ಹೊಡೆದಿದ್ದಾರೆ. ವಿಡಿಯೋ ರಿಲೀಸ್ ಮಾಡಿರುವ ಅವರು, ತಾನು ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿಲ್ಲ, ತನ್ನ ಮತ್ತು ಸ್ವಾಮೀಜಿ ನಡುವೆ ಗುರು-ಭಕ್ತಿಯ ಸಂಬಂಧವಿದೆ ಎಂದು ವಿಡಿಯೊ ಮೂಲಕ ಸ್ಪಷ್ಟಪಡಿಸಿದ್ದಾರೆ. ನನ್ನ ಹೆಸರಿನಲ್ಲಿ ಯಾರೋ ದೂರು ದಾಖಲಿಸಿದ್ದಾರೆ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಅಲ್ಲದೆ ಏಪ್ರಿಲ್ 6ರಂದು ದೂರು ನೀಡಿರುವುದು ಯಾರು ಅಂತಾ ಗೊತ್ತಿಲ್ಲ. ಅದೊಂದು ಸುಳ್ಳು ದೂರು, ಆ ದೂರನ್ನು ಯಾರೂ ನಂಬಬೇಡಿ. ನಾನು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಾಲ್ಕು ದಿನಗಳ ಬಳಿಕ ಬಂದು ಎಲ್ಲವನ್ನು ವಿವರವಾಗಿ ಹೇಳುತ್ತೇನೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Apr 13, 2026 01:45 PM

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More