ಬೆಂಗಳೂರು: ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಇಂದಿನಿಂದ ಉಚಿತ ಪ್ರಯಾಣಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು(ಜೂನ್ 11) ವಿಧಾನಸೌಧ ಮುಂಭಾಗದಲ್ಲಿ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.. ಬೆಳಗ್ಗೆ 11ಕ್ಕೆ ಯೋಜನೆಗೆ ಚಾಲನೆ ನೀಡಲಿರುವ ಸಿಎಂ ಸಿದ್ದರಾಮಯ್ಯ. ನಂತರ ಮೆಜೆಸ್ಟಿಕ್ಗೆ ತೆರಳಿ ಟಿಕೆಟ್ ನೀಡಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರು ಕೆಸ್ಆರ್ಟಿಸಿ(ಸಾರಿಗೆ), ಬಿಎಂಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇನ್ನು ಇನ್ನೊಂದು ಕುಟುಂಬ ಧರ್ಮಸ್ಥಳಕ್ಕೆ ಹೊರಟಿದ್ದು, ಬರುವಾಗ ಫ್ರೀಯಾಗಿ ಬರುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳಕ್ಕೆ ಹೊರಟ ಮಹಿಳೆ ಉಚಿತ ಬಸ್ ಪ್ರಯಾಣದ ಬಗ್ಗೆ ಹೇಳಿದ್ದೇನು ಎನ್ನುವುದನ್ನು ಕೇಳಿ.