ಪ್ರಧಾನಿ ಮೋದಿಗೆ ರಾಖಿ ಕಟ್ಟಿದ ದಕ್ಷಿಣ ಆಫ್ರಿಕಾ ಮಹಿಳೆ; ವಿಡಿಯೋ ಇಲ್ಲಿದೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 22, 2023 | 8:32 PM

Women Tie Rakhi To PM Modi: 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ (BRICS Summit 2023) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಆಪ್ರಿಕಾದ ಜೋಹಾನ್ಸ್‌ಬರ್ಗ್‌ಗೆ ತೆರಳಿದ್ದಾರೆ. ಈ ವೇಳೆ ಮೋದಿಯವರಿಗೆ ಅದ್ಧೂರಿಯಾಗಿ ಸ್ವಾಗತಿಸಲಾಗಿದ್ದು, ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ಪ್ರಧಾನಿ ಮೋದಿಗೆ ರಾಖಿ ಕಟ್ಟಿದ್ದಾರೆ.

ದಕ್ಷಿಣ ಆಫ್ರಿಕಾ, ಆ.22: ಜೋಹಾನ್ಸ್‌ಬರ್ಗ್‌ನಲ್ಲಿ(Johannesburg) ನಡೆಯಲಿರುವ 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ (BRICS Summit 2023) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ದಕ್ಷಿಣ ಆಫ್ರಿಕಾಗೆ ತೆರಳಿದ್ದಾರೆ. ಈ ಹಿನ್ನಲೆ ಜೋಹಾನ್ಸ್​ ಬರ್ಗ್​​ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ಕೋರಲಾಗಿದೆ. ಇದೇ ವೇಳೆ ಪ್ರಧಾನಿ ಮೋದಿಯವರಿಗೆ ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ರಾಖಿ ಕಟ್ಟಿದ್ದಾರೆ. ಇನ್ನು ಬ್ರಿಕ್ಸ್ (ಬ್ರೆಜಿಲ್-ರಷ್ಯಾ-ಭಾರತ-ಚೀನಾ-ದಕ್ಷಿಣ ಆಫ್ರಿಕಾ ಸದಸ್ಯ ರಾಷ್ಟ್ರಗಳನ್ನು ವಿಸ್ತರಿಸುವ ವಿಷಯವು ಆಗಸ್ಟ್ 22 ರಿಂದ24ರವರೆಗೆ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿರುವ ಶೃಂಗಸಭೆಯ ಕಾರ್ಯಸೂಚಿಯಲ್ಲಿದೆ ಎಂದು ನಿರೀಕ್ಷಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 8:32 pm, Tue, 22 August 23

Follow us on