ದಶಕಗಳ ತಮ್ಮ ಕನಸನ್ನು ಸಾಕಾರಗೊಳಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸತ್ಕರಿಸಿ ಅಭಿನಂದಿಸಿದ ಮಹಿಳೆಯರು!

ಅರುಣ್​ ಕುಮಾರ್​ ಬೆಳ್ಳಿ

Updated on: Sep 22, 2023 | 3:10 PM

ನಾರಿ ಶಕ್ತಿ ವಂದನಾ ಅಧಿನಿಯಮ ಲೋಕಸಭಾ ಮತ್ತು ರಾಜ್ಯಸಭೆಯಲ್ಲಿ ಮಂಡಿಸಿ ಅದು ಅಂಗೀಕೃತಗೊಳ್ಳುವಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯುಗ ಪರಿವರ್ತನೆಯ ಹರಿಕಾರರಾಗಿದ್ದಾರೆ ಅಂತ ಕಾರ್ಯಕ್ರಮದ ನಿರೂಪಕಿ ಹೇಳುತ್ತಿರುವುದು ಹಿನ್ನೆಲೆಯಲ್ಲಿ ಕೇಳಿಸುತ್ತದೆ.

ದೆಹಲಿ: ದೇಶದ ಮಹಿಳೆಯರು ಅನೇಕ ವರ್ಷಗಳಿಂದ ನಿರೀಕ್ಷಿಸುತ್ತಿದ್ದ ನಾರಿ ಶಕ್ತಿ ವಂದನಾ ಅಧಿನಿಯಮ (ಮಹಿಳಾ ಮೀಸಲಾತಿ ಬಿಲ್) (Women’s Reservation Bill) ಸಂಸತ್ತಿನ ಎರಡೂ ಸದನಗಳಲ್ಲಿ ಅಂಗೀಕೃತವಾಗಿದ್ದು ದೇಶದೆಲ್ಲೆಡೆ ಮಹಿಳೆಯರು ಹರ್ಷೋಲ್ಲಾಸ ವ್ಯಕ್ತಪಡಿಸುತ್ತಿದ್ದಾರೆ. ಮಹಿಳೆಯರ ನಿರೀಕ್ಷೆಯನ್ನು ಸಾಕಾರಗೊಳಿಸಿ ಅವರ ಸಂಭ್ರಮಕ್ಕೆ ಕಾರಣರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಇಂದು ನಗರದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ (BJP headquarters) ಆಗಮಿಸಿದಾಗ ಪಕ್ಷದ ಮಹಿಳಾ ಮೋರ್ಚಾ ಅವರನ್ನು ಸತ್ಕರಿಸಿತು. ಭಾರೀ ಗಾತ್ರದ ಹೂಮಲೆಯನ್ನು ಪ್ರಧಾನಿ ಮೋದಿಯವರ ಕೊರಳಿಗೆ ಹಾಕಿದ ಮೋರ್ಚಾದ ಸದಸ್ಯರು, ನಂತರ ಅವರು ಪಾದ ಮುಟ್ಟಿ ನಮಸ್ಕರಿಸಿದರು. ಪ್ರತಿಯಾಗಿ ಪ್ರಧಾನಿ ಮೋದಿಯವರು ನಡು ಬಗ್ಗಿಸಿ ಅವರ ಅಭಿನಂದನೆ ಸ್ವೀಕರಿಸಿದರು. ನಾರಿ ಶಕ್ತಿ ವಂದನಾ ಅಧಿನಿಯಮ ಲೋಕಸಭಾ ಮತ್ತು ರಾಜ್ಯಸಭೆಯಲ್ಲಿ ಮಂಡಿಸಿ ಅದು ಅಂಗೀಕೃತಗೊಳ್ಳುವಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯುಗ ಪರಿವರ್ತನೆಯ ಹರಿಕಾರರಾಗಿದ್ದಾರೆ ಅಂತ ಕಾರ್ಯಕ್ರಮದ ನಿರೂಪಕಿ ಹೇಳುತ್ತಿರುವುದು ಹಿನ್ನೆಲೆಯಲ್ಲಿ ಕೇಳಿಸುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 22, 2023 03:08 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.