KSRTC ಬಸ್ನಲ್ಲಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿರುವ ರೇಣುಕಾ ಯಲ್ಲಮ್ಮದೇವಿ ದರ್ಶನಕ್ಕೆ ಸರ್ಕಾರಿ ಬಸ್ನಲ್ಲಿ ಬಂದಿದ್ದ ಮಹಿಳೆಯರು ಸೀಟ್ಗಾಗಿ ಚಪ್ಪಲಿಯಿಂದ ಹೊಡೆದಾಡಿಕೊಂಡಿದ್ದಾರೆ. ಮಹಿಳೆಯರು ಚಪ್ಪಲಿಯಿಂದ ಹೊಡೆದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆಳಗಾವಿ, ಅಕ್ಟೋಬರ್ 25: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ನಲ್ಲಿ ಮಹಿಳೆಯರು ಆಸನಕ್ಕಾಗಿ ಚಪ್ಪಲಿಯಿಂದ (Slippers) ಬಡಿದಾಡಿಕೊಂಡಿರುವ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯರು ಸವದತ್ತಿ (Savadatti) ತಾಲೂಕಿನಲ್ಲಿರುವ ರೇಣುಕಾ ಯಲ್ಲಮ್ಮದೇವಿ (Renuka Yallamma) ದರ್ಶನಕ್ಕೆ ಸರ್ಕಾರಿ ಬಸ್ನಲ್ಲಿ ಬಂದಿದ್ದರು. ಬಸ್ನಲ್ಲಿ ಸೀಟ್ ನನ್ನದು ನನ್ನದು ಎಂದು ಜಗಳವಾಡಿದ್ದಾರೆ. ಗಲಾಟೆ ತಾರಕಕ್ಕೆ ಏರಿ ಕೈಕೈ ಮಿಲಾಯಿಸಿದ್ದಾರೆ. ಬಳಿಕ ಚಪ್ಪಲಿಯಿಂದ ಬಡಿದಾಡಿಕೊಂಡಿದ್ದಾರೆ. ಜಗಳದ ವೇಳೆ ಅಡ್ಡ ಬಂದ ಬಾಲಕಿಗೂ ಮಹಿಳೆ ಚಪ್ಪಲಿಯಿಂದ ಹೊಡೆದಿದ್ದಾಳೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ