‘ಪ್ರೇಮದ ಊರಲಿ’ ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು, ತಾಳಿ ಪೀಸ್ ಪೀಸ್

Updated on: Oct 22, 2026 | 3:15 PM

'ಪ್ರೇಮದ ಊರಲಿ' ಸಿನಿಮಾ, ಇದೀಗ ಭರ್ಜರಿಯಾಗಿ ಸದ್ದು ಮಾಡುತ್ತಾ, ಬಾಕ್ಸ್ ಆಫೀಸ್ ಚಿಂದಿ ಉಡಾಯಿಸುತ್ತಿದೆ. ಸೆಪ್ಟೆಂಬರ್ 25ರಂದು ಬಿಡುಗಡೆಯಾದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು, ರಿಲೀಸ್ ಆಗಿ ಒಂದು ತಿಂಗಳು ಆಗುತ್ತಾ ಆದ್ರೂ ಸಿನಿಮಾದ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಕೆಲವೆಡೆ ಸಿನಿಮಾ ಟಿಕೆಟ್​​​​ಗಾಗಿ ನೂಕುನುಗ್ಗಲು, ಗಲಾಟೆಗಳು ಆಗುತ್ತಿವೆ. ಇದಕ್ಕೆ ಪೂರಕವೆಂಬಂತೆ ಹಾವೇರಿಯಲ್ಲಿ ಟಿಕೆಟ್​​ಗಾಗಿ ಮಹಿಳೆಯರ ನಡುವೆ ಮಾರಾಮಾರಿ ನಡೆದ ಘಟನೆ ಬೆಳಕಿಗೆ ಬಂದಿದೆ.

ಹಾವೇರಿ, (ಅಕ್ಟೋಬರ್ 22): ಮನೋಜ್ ಕುಮಾರ್ ನಿರ್ದೇಶನದ ರಂಗಾಯಣ ರಘು, ಶ್ರೀರಾಮ್, ತಪಸ್ವಿನಿ ಪೂಣಚ್ಚ, ರಮಿಕಾ ಶಿವು ಮುಖ್ಯ ಪಾತ್ರದಲ್ಲಿ ನಟಿಸಿರುವ ಸಣ್ಣ ಬಜೆಟ್ ನ ‘ಪ್ರೇಮದ ಊರಲಿ’ ಸಿನಿಮಾ, ಇದೀಗ ಭರ್ಜರಿಯಾಗಿ ಸದ್ದು ಮಾಡುತ್ತಾ, ಬಾಕ್ಸ್ ಆಫೀಸ್ ಚಿಂದಿ ಉಡಾಯಿಸುತ್ತಿದೆ. ಸೆಪ್ಟೆಂಬರ್ 25ರಂದು ಬಿಡುಗಡೆಯಾದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು, ರಿಲೀಸ್ ಆಗಿ ಒಂದು ತಿಂಗಳು ಆಗುತ್ತಾ ಆದ್ರೂ ಸಿನಿಮಾದ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಕೆಲವೆಡೆ ಸಿನಿಮಾ ಟಿಕೆಟ್​​​​ಗಾಗಿ ನೂಕುನುಗ್ಗಲು, ಗಲಾಟೆಗಳು ಆಗುತ್ತಿವೆ. ಇದಕ್ಕೆ ಪೂರಕವೆಂಬಂತೆ ಹಾವೇರಿಯಲ್ಲಿ ಟಿಕೆಟ್​​ಗಾಗಿ ಮಹಿಳೆಯರ ನಡುವೆ ಮಾರಾಮಾರಿ ನಡೆದ ಘಟನೆ ಬೆಳಕಿಗೆ ಬಂದಿದೆ.

ಹೌದು….ಹಾವೇರಿಯ ಮಾಗಾವಿ ಚಿತ್ರಮಂದಿರದಲ್ಲಿ ಪ್ರೇಮದ ಊರಲಿ ಸಿನಿಮಾ ಟಿಕೆಟ್ ವಿಚಾರಕ್ಕೆ ಮಹಿಳೆಯರು ಕಿತ್ತಾಡಿಕೊಂಡಿದ್ದಾರೆ. ಗಂಡಂದಿರ ಮುಂದೆ ಇಬ್ಬರು ಮಹಿಳೆಯರು ಪರಸ್ಪರ ಕೂದಲು ಹಿಡಿದು, ಮಾಂಗಲ್ಯಸರ ಕಿತ್ತುಕೊಂಡು ಜಗಳವಾಡಿಕೊಂಡಿದ್ದಾರೆ. ಮುಖ-ಮೈ ಪರಚಿಕೊಂಡು ಹೊಡೆದಾಡಿಕೊಂಡ ಗೃಹಿಣಿಯರು, ಕೊನೆಗೆ ನಿಸಿಮಾ ನೋಡದೆ ಹೋಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More