ಸಚಿವರ ಬರ್ತ್​​ಡೇ ಗಿಫ್ಟ್​: ಸೀರೆಗಾಗಿ ಮುಗಿಬಿದ್ದ ಮಹಿಳೆಯರು, ಪೊಲೀಸರು ಸುಸ್ತು

Edited By:

Updated on: Mar 07, 2026 | 11:05 PM

ಸಚಿವ ಕೆಹೆಚ್ ಮುನಿಯಪ್ಪ ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆಯರು ಉಚಿತ ಸೀರೆ ಪಡೆಯಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದಿದ್ದು ನಾರಿ ಮಣಿಯರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಹುಟ್ಟು ಹಬಕ್ಕೆ ಬಂದಿದ್ದ ಮಹಿಳೆಯರಿಗಾಗಿ ಟೆಂಪೋದಲ್ಲಿ ಅಭಿಮಾನಿಗಳು ಸೀರೆಗಳನ್ನ ತಂದಿದ್ದರು. ಇದನ್ನು ನೋಡಿದ ಮಹಿಳೆಯರು ಸೀರೆಗಳನ್ನ ಪಡೆಯವುದಕ್ಕೆ ಕ್ಯೂ ನಲ್ಲು ಮುಗಿಬಿದ್ದಿದ್ದು, ನೂಕುನುಗ್ಗಲು ಮಾಡಿದ್ದಾರೆ. ಇದರಿಂದ ಪೊಲೀಸರು ಹೈರಾಣಾದರು.

ಬೆಂಗಳೂರು, (ಮಾರ್ಚ್ 07): ಸಚಿವ ಕೆಹೆಚ್ ಮುನಿಯಪ್ಪ ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆಯರು ಉಚಿತ ಸೀರೆ ಪಡೆಯಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದಿದ್ದು ನಾರಿ ಮಣಿಯರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಹುಟ್ಟು ಹಬಕ್ಕೆ ಬಂದಿದ್ದ ಮಹಿಳೆಯರಿಗಾಗಿ ಟೆಂಪೋದಲ್ಲಿ ಅಭಿಮಾನಿಗಳು ಸೀರೆಗಳನ್ನ ತಂದಿದ್ದರು. ಇದನ್ನು ನೋಡಿದ ಮಹಿಳೆಯರು ಸೀರೆಗಳನ್ನ ಪಡೆಯವುದಕ್ಕೆ ಕ್ಯೂ ನಲ್ಲು ಮುಗಿಬಿದ್ದಿದ್ದು, ನೂಕುನುಗ್ಗಲು ಮಾಡಿದ್ದಾರೆ. ಇದರಿಂದ ಪೊಲೀಸರು ಹೈರಾಣಾದರು.

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More