ಹೊರಗೆ ಬಂದು ಮಾತಾಡ್ಲಿ: ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

Edited By:

Updated on: Apr 22, 2026 | 6:21 PM

ಕರ್ನಾಟಕದಲ್ಲಿ ತೀವ್ರ ಬಿಸಿಲ ಜೊತೆಗೆ ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ. ಹಲವು ಜಿಲ್ಲೆಗಳಲ್ಲಿ ಜನರಿಗೆ ಒಂದೆಡೆ ಬಿಸಿಲು ನೆತ್ತಿ ಸುಡುತ್ತಿದ್ದರೆ, ಮತ್ತೊಂದೆಡೆ ನೀರು ಸಿಗುತ್ತಿಲ್ಲ. ಇದರಿಂದ ಜನ ಕಂಗಾಲಾಗಿದ್ದಾರೆ. ಅದರಂತೆ ಕೊಪ್ಪಳದಲ್ಲೂ ನೀರಿನ ಕೊರತೆ ಎದುರಾಗಿದ್ದು, ಇದರಿಂದ ರೊಚ್ಚಿಗೆದ್ದ ಮಹಿಳೆಯರು ಜಿಲ್ಲಾ ಉಸ್ತುವಾರಿ ಕಾರಿಗೆ ಅಡ್ಡಿಹಾಕಿ ಆಕ್ರೋಶ ಹೊರಹಾಕಿದ್ದಾರೆ. ಹೌದು...ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ತೆರಳುತ್ತಿದ್ದ ವೇಳೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ಮಹಿಳೆಯರು ಖಾಲಿ ಕೊಡದೊಂದಿಗೆ ಸಚಿವ ಶಿವರಾಜ್ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ್ದಾರೆ.

ಕೊಪ್ಪಳ, (ಏಪ್ರಿಲ್ 22): ಕರ್ನಾಟಕದಲ್ಲಿ ತೀವ್ರ ಬಿಸಿಲ ಜೊತೆಗೆ ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ. ಹಲವು ಜಿಲ್ಲೆಗಳಲ್ಲಿ ಜನರಿಗೆ ಒಂದೆಡೆ ಬಿಸಿಲು ನೆತ್ತಿ ಸುಡುತ್ತಿದ್ದರೆ, ಮತ್ತೊಂದೆಡೆ ನೀರು ಸಿಗುತ್ತಿಲ್ಲ. ಇದರಿಂದ ಜನ ಕಂಗಾಲಾಗಿದ್ದಾರೆ. ಅದರಂತೆ ಕೊಪ್ಪಳದಲ್ಲೂ ನೀರಿನ ಕೊರತೆ ಎದುರಾಗಿದ್ದು, ಇದರಿಂದ ರೊಚ್ಚಿಗೆದ್ದ ಮಹಿಳೆಯರು ಜಿಲ್ಲಾ ಉಸ್ತುವಾರಿ ಕಾರಿಗೆ ಅಡ್ಡಿಹಾಕಿ ಆಕ್ರೋಶ ಹೊರಹಾಕಿದ್ದಾರೆ. ಹೌದು…ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ತೆರಳುತ್ತಿದ್ದ ವೇಳೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ಮಹಿಳೆಯರು ಖಾಲಿ ಕೊಡದೊಂದಿಗೆ ಸಚಿವ ಶಿವರಾಜ್ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಸಭೆಯಲ್ಲಿ ಸಚಿವರ ಪುತ್ರನಿಗೆ ರಾಜ ಮರ್ಯಾದೆ: ಕೈಕಟ್ಟಿ ನಿಂತ ಅಧಿಕಾರಿಗಳು

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More