ಫ್ರೀಡಂ ಪಾರ್ಕ್ನಲ್ಲಿ ಮಹಿಳಾ ಕಾರ್ಯಕರ್ತೆಯರು ಸಿದ್ದರಾಮಯ್ಯನವರ ಕಾಲುಮುಟ್ಟಿ ನಮಸ್ಕರಿಸಿದರು
ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಿದಾಗ ಕೆಲ ಮಹಿಳಾ ಕಾರ್ಯಕರ್ತರು ಅವರು ಕುಳಿತಲ್ಲಿಗೆ ಬಂದು ಕಾಲು ಮುಟ್ಟಿ ನಮಸ್ಕರಿಸುತ್ತಾರೆ.
ಬೆಂಗಳೂರು: ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿಯವರನ್ನು (Sonia Gandhi) ವಿಚಾರಣೆಗೆ ಕರೆದಿರುವುದು ಖಂಡಿಸಿ ಕೆಪಿಸಿಸಿ ಸದಸ್ಯರು ಮತ್ತು ಸಾವಿರಾರು ಕಾರ್ಯಕರ್ತರು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಿದಾಗ ಕೆಲ ಮಹಿಳಾ ಕಾರ್ಯಕರ್ತರು ಅವರು ಕುಳಿತಲ್ಲಿಗೆ ಬಂದು ಕಾಲು ಮುಟ್ಟಿ ನಮಸ್ಕರಿಸುತ್ತಾರೆ. ಸಿದ್ದರಾಮಯ್ಯನವರ ಎಡಭಾಗದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ (Veerappa Moily) ಮತ್ತು ಬಲಭಾಗದಲ್ಲಿ ಮಾಜಿ ಸಚಿವ ರಮಾನಾಥ್ ರೈ (Ramanath Rai) ಅವರಿದ್ದಾರೆ.