ಅತ್ಯದ್ಭುತ ಫ್ಲೈಯಿಂಗ್ ಕ್ಯಾಚ್ ಹಿಡಿದ ಜೆಮಿಮಾ ರೊಡ್ರಿಗಸ್
India Women vs Australia Women: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 48.5 ಓವರ್ಗಳಲ್ಲಿ 330 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಆಸ್ಟ್ರೇಲಿಯಾ ತಂಡವು 49 ಓವರ್ಗಳಲ್ಲಿ ಚೇಸ್ ಮಾಡಿ 3 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಪಡೆ ಹೊಸ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದೆ.
ವಿಶಾಖಪಟ್ಟಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ನ 13ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರ್ತಿ ಜೆಮಿಮಾ ರೊಡ್ರಿಗಸ್ ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರ ಗಮನ ಸೆಳೆದಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 48.5 ಓವರ್ಗಳಲ್ಲಿ 330 ರನ್ಗಳಿಸಿ ಆಲೌಟ್ ಆಗಿತ್ತು.
331 ರನ್ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು 85 ರನ್ಗೆ ಮೊದಲ ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಬೆತ್ ಮೂನಿ (4) ವಿಕೆಟ್ ಪಡೆಯುವಲ್ಲಿ ಜೆಮಿಮಾ ರೊಡ್ರಿಗಸ್ ಪ್ರಮುಖ ಪಾತ್ರವಹಿಸಿದರು.
ದೀಪ್ತಿ ಶರ್ಮಾ ಎಸೆದ ಪಂದ್ಯದ 27ನೇ ಓವರ್ನ 2ನೇ ಎಸೆತದಲ್ಲಿ ಬೆತ್ ಮೂನಿ ಶಾರ್ಟ್ ಕವರ್ನತ್ತ ಬಾರಿಸಿದ್ದರು. ಈ ವೇಳೆ ಅಲ್ಲೇ ಫೀಲ್ಡಿಂಗ್ನಲ್ಲಿದ್ದ ಜೆಮಿಮಾ ರೊಡ್ರಿಗಸ್ ಅಧ್ಭುತವಾಗಿ ಡೈವ್ ಹೊಡೆದು ಚೆಂಡು ಹಿಡಿದರು. ಇದೀಗ ಈ ಅತ್ಯುತ್ತಮ ಫೀಲ್ಡಿಂಗ್ ವಿಡಿಯೋ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 48.5 ಓವರ್ಗಳಲ್ಲಿ 330 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಆಸ್ಟ್ರೇಲಿಯಾ ತಂಡವು 49 ಓವರ್ಗಳಲ್ಲಿ ಚೇಸ್ ಮಾಡಿ 3 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದಿದ್ದ ವಿಡಿಯೋ ವೈರಲ್
ಕ್ರಾಂತಿ ಕಿಚ್ಚಿನ ಮಧ್ಯೆ ಖರ್ಗೆ ಭೇಟಿಯಾಗಿದ್ಯಾಕೆ? ಗುಟ್ಟುಬಿಚ್ಚಿಟ್ಟ ಡಿಕೆ
ಹರಿಹರದ ಮನೆಯಲ್ಲಿ ಟೈಲ್ಸ್ ಕೆಳಗೆ ನಿಗೂಢ ಶಾಖ! ಬೆಚ್ಚಿಬಿದ್ದ ಮನೆ ಮಂದಿ
IND vs PAK: ಪಾಕಿಸ್ತಾನ್ ವಿರುದ್ಧ ಹೀನಾಯವಾಗಿ ಸೋತ ಭಾರತ

