Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಿ ಶಕ್ತಿ ವಂದನಾ ಅಧಿನಿಯಮ; ಪ್ರಧಾನಿ ಮೋದಿಯವರ ಉದಾತ್ತ ಚಿಂತನೆ ಮತ್ತು ದೂರದರ್ಶಿತ್ವದ ಕಾರಣ ಮಸೂದೆ ಜಾರಿಗೊಂಡಿದೆ: ಪ್ರಲ್ಹಾದ್ ಜೋಶಿ

ನಾರಿ ಶಕ್ತಿ ವಂದನಾ ಅಧಿನಿಯಮ; ಪ್ರಧಾನಿ ಮೋದಿಯವರ ಉದಾತ್ತ ಚಿಂತನೆ ಮತ್ತು ದೂರದರ್ಶಿತ್ವದ ಕಾರಣ ಮಸೂದೆ ಜಾರಿಗೊಂಡಿದೆ: ಪ್ರಲ್ಹಾದ್ ಜೋಶಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Sep 22, 2023 | 11:32 AM

80 ರ ದಶಕದಿಂದ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಪ್ರಯತ್ನಗಳು ಆರಂಭಗೊಂಡಿದ್ದವು ಆದರೆ ಸಾಧ್ಯವಾಗಿರಲಿಲ್ಲ. ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ಭಗೀರತ ಪ್ರಯತ್ನ ನಡೆಸಿದಾಗ್ಯೂ ಬಹುಮತದ ಕೊರತೆಯಿಂದಾಗಿ ಅದು ನೆರವೇರಲಿಲ್ಲ. ಯುಪಿಎ ಸರ್ಕಾರ ಮಹಿಳಾ ಮೀಸಲಾತಿ ಬಿಲ್ ಅನ್ನು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬಳಸಿಕೊಂಡಿತು ಎಂದು ಜೋಶಿ ಹೇಳಿದ್ದಾರೆ.

ನವದೆಹಲಿ: ಭಾರತದ ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿಯನ್ನು ಕಲ್ಪಿಸುವ ನಾರಿ ಶಕ್ತಿ ವಂದನಾ ಅಧಿನಿಯಮವನ್ನು (Women’s Reservation Bill) ಜಾರಿಗೆ ತಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ಮುತ್ಸದ್ದಿನ, ದೂರದರ್ಶಿತ್ವ ಮತ್ತು ಉದಾತ್ತ ಮನೋಭಾವನೆಯನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅಭಿನಂದಿಸುತ್ತಾ ಕೊಂಡಾಡಿದ್ದಾರೆ. ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಸಚಿವ ಜೋಶಿ, ವಿಶ್ವದ ಯಾವುದೇ ಶಾಸನ ಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲಾಗಿಲ್ಲ, ಆದರೆ ಭಾರತದಲ್ಲಿ ಮಾತ್ರ ಅದು ಸಾಧ್ಯಾವಾಗಿದ್ದು ಮೋದಿಯವರ ರಾಜಕೀಯ ಇಚ್ಛಾಶಕ್ತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಹೇಳಿದ್ದಾರೆ. 80 ರ ದಶಕದಿಂದ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಪ್ರಯತ್ನಗಳು ಆರಂಭಗೊಂಡಿದ್ದವು ಆದರೆ ಸಾಧ್ಯವಾಗಿರಲಿಲ್ಲ. ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ಭಗೀರತ ಪ್ರಯತ್ನ ನಡೆಸಿದಾಗ್ಯೂ ಬಹುಮತದ ಕೊರತೆಯಿಂದಾಗಿ ಅದು ನೆರವೇರಲಿಲ್ಲ. ಯುಪಿಎ ಸರ್ಕಾರ ಮಹಿಳಾ ಮೀಸಲಾತಿ ಬಿಲ್ ಅನ್ನು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬಳಸಿಕೊಂಡಿತು. ಆದರೆ ಪ್ರಧಾನಿ ಮೋದಿಯವರು ಮಹಿಳೆಯರ ದಶಕಗಳ ಕನಸನ್ನು ಸಾಕಾರಗೊಳಿಸಿದ್ದಾರೆ. ಅವರ ಪ್ರಯತ್ನದಿಂದಾಗಿ ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹಿಳೆಯರು ಸಹ ಪಾಲ್ಗೊಳ್ಳಲಿರುವುದರಿಂದ ಅಭಿವೃದ್ಧಿ ವೇಗ ದ್ವಿಗುಣಗೊಳ್ಳಲಿದೆ ಎಂದು ಜೋಶಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ