ಸರ್ಕಾರದ ಸೂಚನೆ ಮೇರೆಗೆ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಶುರುವಾಗಿತ್ತು: ಜಿ ಪರಮೇಶ್ವರ್

Updated on: Jun 02, 2025 | 3:40 PM

ತಮಗೆ ಪೊಲೀಸರ ನೀಡಿರುವ ಮಾಹಿತಿ ಪ್ರಕಾರ, ಪ್ರತಿಭಟನೆಯ ಮೊದಲ ದಿನ 3-4 ಜನ ಸಾವಿರ ಸೇರಿದ್ದರು, ಮೇ 31ರಂದು ಸುಮಾರು ಒಂದು ಸಾವಿರ ಜನ ಪ್ರತಿಭಟನೆಕಾರರು ಸ್ಥಳದಲ್ಲಿದ್ದರು ಎಂದು ಹೇಳಿದ ಪರಮೇಶ್ವರ್, ಧರಣಿ ನಡೆಸುತ್ತಿದ್ದವರು ಕಾಮಗಾರಿ ನಿಲ್ಲಿಸುವುದಕ್ಕೆ ಮುಂದಾದಾಗ ಪೊಲೀಸರು ತಡೆಯುವ ಪ್ರಯತ್ನ ಮಾಡಿದ್ದಾರೆ, ಆಗ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ ನಡೆದಿದೆ ಎಂದು ಹೇಳಿದರು.

ತುಮಕೂರು, ಜೂನ್ 2: ಹೇಮಾವತಿ ಲಿಂಕ್​ಗೆ ಕೆನಾಲ್ (Hemavati Link Canal) ಸಂಬಂಧಿಸಿದಂತೆ ತುಮಕೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಜಿಲ್ಲಾ ಉಸ್ತುವಾರಿ ಸಚಿವ ಜಿ ಪರಮೇಶ್ವರ್, ಮೇ 31ರಂದು ಏನು ನಡೆದಿದೆ ಅನ್ನೋದನ್ನು ವಿವರಿಸಿದರು. ಕಾಮಗಾರಿ ಶುರುಮಾಡಿದ ಗುತ್ತಿಗೆದಾರರು ಸರ್ಕಾರದ ಸೂಚನೆ ಮೇರೆಗೆ ಅದನ್ನು ಮಾಡಿದ್ದರು, ಅದರೆ ಶಾಸಕರಾದ ಬಿ ಸುರೇಶ್ ಗೌಡ, ಜ್ಯೋತಿ ಗಣೇಶ್ ಮತ್ತು ಕೃಷ್ಣಪ್ಪ ಸೇರಿದಂತೆ ಹಲವಾರು ಜನ ಟಿ ರಾಂಪುರ ಎಂಬಲ್ಲಿ ಒಂದುಗೂಡಿ ಧರಣಿ ನಡೆಸಿದ್ದಾರೆ ಮತ್ತು ಕೆನಾಲ್ ಕೆಲಸವನ್ನು ನಿಲ್ಲಿಸಿದ್ದಾರೆ. ಜಿಲ್ಲಾಡಳಿತ, ಕಾನೂನಿಗೆ ವಿರುದ್ಧವಾಗಿ ಹೋಗೋದು ಬೇಡ ಪ್ರತಿಭಟನೆಕಾರರಿಗೆ ಮನವೊಲಿಸುವ ಪ್ರಯತ್ನ ಮಾಡಿದರೂ ಅವರು ಮಾತು ಕೇಳಿಲ್ಲ ಎಂದು ಪರಮೇಶ್ವರ್ ಹೇಳಿದರು.

ಇದನ್ನೂ ಓದಿ:  ಕರಾವಳಿ ಪ್ರಾಂತ್ಯದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುವುದು ಅನಿವಾರ್ಯವಾಗಿತ್ತು: ಜಿ ಪರಮೇಶ್ವರ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: Jun 02, 2025 03:40 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More