AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ: ರಾಮು ರಾವ್ ಜೂಪಲ್ಲಿ

ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ: ರಾಮು ರಾವ್ ಜೂಪಲ್ಲಿ

ಗಂಗಾಧರ​ ಬ. ಸಾಬೋಜಿ
|

Updated on: Mar 23, 2026 | 10:26 PM

Share

ಜಾಗತಿಕ ಪ್ರತಿಭೆಗಳ ಬೇಡಿಕೆಯನ್ನು ಪೂರೈಸಲು ಭಾರತ ಸಿದ್ಧವಾಗಿದೆ ಎಂದು ರಾಮು ರಾವ್ ಜುಪಲ್ಲಿ WITT ಶೃಂಗಸಭೆ 2026 ರಲ್ಲಿ ಹೇಳಿದರು. ಪ್ರಧಾನಮಂತ್ರಿ ಮೋದಿ ಅವರ ನಾಯಕತ್ವದಲ್ಲಿ, ಭಾರತವು ತನ್ನ ಯುವ ಜನಸಂಖ್ಯೆ, STEM ಸಾಮರ್ಥ್ಯ ಮತ್ತು ಡಿಜಿಟಲ್ ಮೂಲಸೌಕರ್ಯದ ಏಳು ಸ್ತಂಭಗಳ ಮೂಲಕ ವಿಶ್ವದ ಪ್ರತಿಭಾ ಕಾರ್ಖಾನೆಯಾಗಿ ಹೊರಹೊಮ್ಮಿದೆ. ಆರ್ಥಿಕ ಅಸ್ಥಿರತೆಯ ನಡುವೆಯೂ ಭಾರತದ ಪಾತ್ರ ನಿರ್ಣಾಯಕವಾಗಿದೆ.

ನವದೆಹಲಿ, ಮಾರ್ಚ್​ 23: ನಾವು ಇಂದು ಇತಿಹಾಸದ ಒಂದು ಪ್ರಮುಖ ಘಟ್ಟದಲ್ಲಿದ್ದೇವೆ. ಇಡೀ ವಿಶ್ವವೇ ಆರ್ಥಿಕ ಸಂಕಷ್ಟದಿಂದ ಪರದಾಡುತ್ತಿದೆ. ನಮ್ಮ ಭಾರತ ದೇಶಕ್ಕೂ ಇದರ ಬಿಸಿ ತಟ್ಟಿದ್ದರೂ ಸಹ ಜಗತ್ತಿನಲ್ಲಿ ಭಾರತ ಇಂದು ಧೈರ್ಯ ಮತ್ತು ಸ್ಥಿರವಾಗಿ ಎದ್ದು ನಿಂತಿದೆ ಎಂದು ಎಕ್ಸಿಕ್ಯೂಟಿವ್ ವೈಸ್ ಚೇರ್ಮನ್, ಮೈ ಹೋಂ ಗ್ರೂಪ್ ರಾಮು ರಾವ್ ಜೂಪಲ್ಲಿ ಹೇಳಿದ್ದಾರೆ. ಟಿವಿ9 ವಾರ್ಷಿಕ ಶೃಂಗಸಭೆ ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ಪ್ರಜಾಪ್ರಭುತ್ವ, ಜನಸಂಖ್ಯೆ ಮತ್ತು ವೈವಿಧ್ಯತೆಯ ಶಕ್ತಿಯನ್ನು ಹೊಂದಿದೆ. ಭಾರತವು ಶೀಘ್ರದಲ್ಲೇ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಹಾದಿಯಲ್ಲಿದ್ದು, ವಾರ್ಷಿಕವಾಗಿ ಶೇ. 7ರಷ್ಟು ಬೆಳವಣಿಗೆಯನ್ನು ಕಾಣುತ್ತಿದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More