ಯಾದಗಿರಿ: ಶಾಲಾ ಮಕ್ಕಳ ಬಿಸಿಯೂಟಕ್ಕೆ ಹುಳ ಬಿದ್ದಿರೋ ಅಕ್ಕಿ ಬೇಳೆ; TV9 ರಿಯಾಲಿಟಿ ಚೆಕ್ನಲ್ಲಿ ಬಯಲಾಯ್ತು ಅಸಲಿಯತ್ತು
ಯಾದಗಿರಿ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಬಿಸಿಯೂಟದ ಗುಣಮಟ್ಟದ ಕುರಿತು ಟಿವಿ9 ರಿಯಾಲಿಟಿ ಚೆಕ್ ನಡೆಸಿ ಆಘಾತಕಾರಿ ಅಂಶಗಳನ್ನು ಹೊರಹಾಕಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಸರ್ಕಾರವು ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುತ್ತಿದ್ದರೂ, ಆಹಾರ ಧಾನ್ಯಗಳ ಗುಣಮಟ್ಟವನ್ನು ಪರಿಶೀಲಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಯಾದಗಿರಿ ತಾಲೂಕಿನ ಮುಂಡರಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 631 ಮಕ್ಕಳಿಗೆ ಪ್ರತಿನಿತ್ಯ ಬಿಸಿಯೂಟ ನೀಡಲಾಗುತ್ತದೆ.
ಯಾದಗಿರಿ, ನವೆಂಬರ್ 19: ಯಾದಗಿರಿ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಬಿಸಿಯೂಟದ ಗುಣಮಟ್ಟದ ಕುರಿತು ಟಿವಿ9 ರಿಯಾಲಿಟಿ ಚೆಕ್ ನಡೆಸಿ ಆಘಾತಕಾರಿ ಅಂಶಗಳನ್ನು ಹೊರಹಾಕಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಸರ್ಕಾರವು ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುತ್ತಿದ್ದರೂ, ಆಹಾರ ಧಾನ್ಯಗಳ ಗುಣಮಟ್ಟವನ್ನು ಪರಿಶೀಲಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಯಾದಗಿರಿ ತಾಲೂಕಿನ ಮುಂಡರಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 631 ಮಕ್ಕಳಿಗೆ ಪ್ರತಿನಿತ್ಯ ಬಿಸಿಯೂಟ ನೀಡಲಾಗುತ್ತದೆ. ಆದರೆ, ಈ ಶಾಲೆಗೆ ಪೂರೈಕೆಯಾಗುವ ಅಕ್ಕಿ ಹುಳಗಳಿಂದ ಕೂಡಿದ್ದು, ಗೋಧಿ ಸಹ ಹುಳದಿಂದ ಜುಡ್ಡು ಹಿಡಿದಿದೆ. ತೊಗರೆಬೇಳೆಯಲ್ಲಿಯೂ ಕಳಪೆ ಗುಣಮಟ್ಟ ಮತ್ತು ಧೂಳು ಕಂಡುಬಂದಿದೆ. ಜಾನುವಾರುಗಳೂ ತಿನ್ನಲು ಯೋಗ್ಯವಲ್ಲದ ಇಂತಹ ಆಹಾರ ಧಾನ್ಯಗಳನ್ನು ಅಕ್ಷರ ದಾಸೋಹ ಯೋಜನೆಯಡಿ ಮಕ್ಕಳಿಗೆ ನೀಡಲಾಗುತ್ತಿದೆ. ಟಿವಿ ರಿಯಾಲಿಟಿ ಚೆಕ್ ವೇಳೆ ಈ ಸಮಸ್ಯೆ ಯಾದಗಿರಿ ಜಿಲ್ಲೆಯ ಹಲವು ಶಾಲೆಗಳಲ್ಲಿಯೂ ವ್ಯಾಪಕವಾಗಿದೆ ಎಂದು ಪತ್ತೆಯಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.