ಎಲ್ಲಿಸ್ ಪೆರ್ರಿ ಸೂಪರ್ವುಮೆನ್ ಕ್ಯಾಚ್: ವಿಡಿಯೋ ವೈರಲ್
Royal Challengers Bengaluru Women vs Delhi Capitals Women: ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 147 ರನ್ ಕಲೆಹಾಕಿತು. 148 ರನ್ಗಳ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ 15.3 ಓವರ್ಗಳಲ್ಲಿ ಚೇಸ್ ಮಾಡಿ 9 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ಲೇಆಫ್ಗೆ ಎಂಟ್ರಿ ಕೊಟ್ಟಿದೆ.
ವುಮೆನ್ಸ್ ಪ್ರೀಮಿಯರ್ ಲೀಗ್ನ ಸೂಪರ್ವುಮೆನ್ ಎಲ್ಲಿಸ್ ಪೆರ್ರಿ ಇದೀಗ ಸೂಪರ್ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಪೆರ್ರಿ ಈ ಅದ್ಭುತ ಕ್ಯಾಚ್ ಹಿಡಿದಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 147 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಲು ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕರಾಗಿ ಮೆಗ್ ಲ್ಯಾನಿಂಗ್ ಹಾಗೂ ಶಫಾಲಿ ವರ್ಮಾ ಕಣಕ್ಕಿಳಿದಿದ್ದರು.
ಅದರಂತೆ ಇನಿಂಗ್ಸ್ ಆರಂಭಿಸಿದ ಡೆಲ್ಲಿ ಪಡೆಗೆ 3ನೇ ಓವರ್ನಲ್ಲಿ ಆಘಾತ ಎದುರಾಗಿತ್ತು. ಇಂತಹದೊಂದು ಆಘಾತ ನೀಡಿದ್ದು ಎಲ್ಲಿಸ್ ಪೆರ್ರಿ. ರೇಣುಕಾ ಸಿಂಗ್ ಎಸೆದ 3ನೇ ಓವರ್ನ 3ನೇ ಎಸೆತವನ್ನು ಮೆಗ್ ಲ್ಯಾನಿಂಗ್ ಮಿಡ್-ಆನ್ನತ್ತ ಬಾರಿಸಿದ್ದರು.
ಆದರೆ ಥರ್ಟಿ ಯಾರ್ಡ್ ಸರ್ಕಲ್ನಲ್ಲಿ ಫೀಲ್ಡಿಂಗ್ನಲ್ಲಿದ್ದ ಎಲ್ಲಿಸ್ ಪೆರ್ರಿ ಅದ್ಭುತ ಜಿಗಿದು ಚೆಂಡನ್ನು ಹಿಡಿದರು. ಅಲ್ಲಿಗೆ ಮೆಗ್ ಲ್ಯಾನಿಂಗ್ (2) ಇನಿಂಗ್ಸ್ ಕೊನೆಗೊಂಡಿತು. ಇದೀಗ ಎಲ್ಲಿಸ್ ಪೆರ್ರಿಯ ಈ ಅದ್ಭುತ ಫೀಲ್ಡಿಂಗ್ ವಿಡಿಯೋ ವೈರಲ್ ಆಗಿದ್ದು, ಕ್ರಿಕೆಟ್ ಪ್ರೇಮಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಇನ್ನು ಈ ಪಂದ್ಯದಲ್ಲಿ ಆರ್ಸಿಬಿ ನೀಡಿದ 148 ರನ್ಗಳ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ 15.3 ಓವರ್ಗಳಲ್ಲಿ ಚೇಸ್ ಮಾಡಿ 9 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ಲೇಆಫ್ಗೆ ಎಂಟ್ರಿ ಕೊಟ್ಟಿದೆ.

ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್

ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್

ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್

ಯತ್ನಾಳ್ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
