VIDEO: ನೀ ನಿನ್ ಕೆಲ್ಸ ನೋಡ್ಕೊ… ಹರ್ಮನ್ಪ್ರೀತ್ ಕೌರ್ ಆವಾಜ್
UP Warriorz Women vs Mumbai Indians Women: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಪಿ ವಾರಿಯರ್ಸ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 150 ರನ್ ಕಲೆಹಾಕಿತು. ಈ ಗುರಿಯನ್ನು ಮುಂಬೈ ಇಂಡಿಯನ್ಸ್ ತಂಡ 18.3 ಓವರ್ಗಳಲ್ಲಿ ಚೇಸ್ ಮಾಡಿ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ವುಮೆನ್ಸ್ ಪ್ರೀಮಿಯರ್ ಲೀಗ್ನ 16ನೇ ಪಂದ್ಯದಲ್ಲಿ ಆಟಗಾರ್ತಿಯರಿಬ್ಬರು ಮೈದಾನದಲ್ಲೇ ಬೈದಾಡಿಕೊಂಡ ಘಟನೆ ನಡೆದಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ದುಕೊಂಡಿತು.
ಅದರಂತೆ ಮೊದಲು ಬ್ಯಾಟ್ ಮಾಡಿದ ಯುಪಿ ವಾರಿಯರ್ಸ್ ತಂಡವು 19 ಓವರ್ಗಳಲ್ಲಿ 143 ರನ್ ಕಲೆಹಾಕಿತ್ತು. ಆದರೆ ನಿಗದಿತ ಸಮಯದೊಳಗೆ 19 ಓವರ್ಗಳನ್ನು ಪೂರ್ಣಗೊಳಿಸದ ಕಾರಣ ಕೊನೆಯ ಓವರ್ಗೂ ಮುನ್ನ ಬೌಂಡರಿ ಲೈನ್ನಿಂದ ಓರ್ವ ಫೀಲ್ಡರ್ನನ್ನು ಕಡಿತಗೊಳಿಸಬೇಕೆಂದು ಅಂಪೈರ್ ಸೂಚಿಸಿದ್ದರು.
ಇದೇ ವೇಳೆ ಮುಂಬೈ ಇಂಡಿಯನ್ಸ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಹಾಗೂ ಅಮೆಲಿಯಾ ಕೇರ್ ಅಂಪೈರ್ ಜೊತೆ ವಾದಕ್ಕಿಳಿದಿದ್ದಾರೆ. ಈ ಸಂದರ್ಭದಲ್ಲಿ ಯುಪಿ ವಾರಿಯರ್ಸ್ ತಂಡದ ಆಟಗಾರ್ತಿ ಸೋಫಿ ಎಕ್ಲೆಸ್ಟೋನ್ ಮುಂಬೈ ಇಂಡಿಯನ್ಸ್ ತಂಡದ ನಾಯಕಿಯನ್ನು ಗುರಿಯಾಗಿಸಿ ಅಂಪೈರ್ ಜೊತೆ ಅದೇನೋ ಹೇಳಿದ್ದಾರೆ.
ಇದರಿಂದ ಕುಪಿತಗೊಂಡ ಹರ್ಮನ್ಪ್ರೀತ್ ಕೌರ್ ನೀನು ಹೋಗಿ ನಿನ್ ಕೆಲಸ ನೋಡು ಎಂಬಾರ್ಥದಲ್ಲಿ ಆಜ್ಞೆ ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ವಾಕ್ಸಮರ ಏರ್ಪಟ್ಟಿದ್ದು, ಅಷ್ಟರಲ್ಲೇ ಅಂಪೈರ್ ಹಾಗೂ ಸಹ ಆಟಗಾರ್ತಿಯರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಸಿದ್ದಾರೆ. ಇದೀಗ ಹರ್ಮನ್ಪ್ರೀತ್ ಕೌರ್ ಹಾಗೂ ಸೋಫಿ ಎಕ್ಲೆಸ್ಟೋನ್ ನಡುವಣ ಜಗಳದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಪಿ ವಾರಿಯರ್ಸ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 150 ರನ್ ಕಲೆಹಾಕಿತು. ಈ ಗುರಿಯನ್ನು ಮುಂಬೈ ಇಂಡಿಯನ್ಸ್ ತಂಡ 18.3 ಓವರ್ಗಳಲ್ಲಿ ಚೇಸ್ ಮಾಡಿ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.